ಚಿಕ್ಕೋಡಿ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳಿಂದ ಹತ್ಯೆ ಆಗಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡಿಸಿದ್ದಾರೆ.ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆ ಇವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲೆಂದೇ ಪೊಲೀಸ್ ಇಲಾಖೆ ಇದೆ. ಪೊಲೀಸರು ತನಿಖೆ ಮಾಡಲಿ ಎಂದರು.  ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂದು ನೀವೇ ನೋಡುತ್ತಿದ್ದೀರಾ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನ ಉತ್ತರ ಕೊಡುತ್ತಾರೆ. ಸದ್ಯ ಯಾರು ಈ ಘಟನೆಯನ್ನು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. ಇದನ್ನೂ ಓದಿ:  ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಈಶ್ವರಪ್ಪಶಿವಮೊಗ್ಗ ಕೊಲೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ ಈಶ್ವರಪ್ಪನವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದರು. ಅಲ್ಲದೇ ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.
 Sign in to your account
Username or Email Address


Password

 Remember Me


