ಶಿವಮೊಗ್ಗ: ಯುವಕನ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹರ್ಷನ ಕೊಲೆಗೆ ಎರಡು ವರ್ಷಗಳ ಹಿಂದೆಯೇ ಸುಪಾರಿ ಕೊಟ್ಟಿದ್ದರು ಎಂದು ಮೃತನ ಸಂಬಂಧಿ ಗಂಭೀರ ಆರೋಪ ಮಾಡಿದ್ದಾರೆ.ಮೆಗ್ಗಾನ್ ಆಸ್ಪತ್ರೆಯ ಬಳಿ ಹತ್ಯೆಯಾದ ಯುವಕನ ಸಂಬಂಧಿ ಪ್ರವೀಣ್ ಮಾತನಾಡಿದ್ದು, ಹೊಡೆದು ಹಾಕಿದ್ದಾರೆ ಅಷ್ಟೇ. ಇವನನ್ನು ಹೊಡೆದು ಹಾಕಿದರೆ 10 ಲಕ್ಷ ರೂ. ಕೊಡ್ತೀನಿ ಅಂತ 2 ವರ್ಷದಿಂದಲೂ‌ ಮುಸ್ಲಿಮರು ಹೇಳುತ್ತಿದ್ದರು. ಯಾರು ಹೊಡೆದು ಹಾಕಿದ್ದಾರೆ ಅಂತ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟಪೊಲೀಸರು ಏನು ತನಿಖೆ ಮಾಡುತ್ತಾರೋ ಅದರ ಆಧಾರದ ಮೇಲೆ ನಮಗೆ ಗೊತ್ತಾಗಬೇಕು. ಎರಡು ವರ್ಷದಿಂದಲೂ ಈ ಜಿದ್ದು ಇದ್ದೇ ಇದೆ ಎಂದು ಪ್ರವೀಣ್‌ ಮಾಹಿತಿ ನೀಡಿದ್ದಾನೆ.ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.Sign in to your account
Username or Email Address


Password

 Remember Me


