ಹಾವೇರಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ರೈತ ಪರಮೇಶಪ್ಪ ನಂದೀಹಳ್ಳಿ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್‍ಕುಮಾರ್ ತಂದೆ ಹೃದಯಾಘಾತದಿಂದ ನಿಧನಪರಮೇಶಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದು, ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯವನ್ನ ಮಾಡಿದ್ದಾರೆ. ರೈತನಿಗೆ ಸೂಕ್ತ ಪರಿಹಾರವನ್ನ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಪೊಲೀಸ್ ಮಗಳನ್ನೆ ಕತ್ತು ಹಿಸುಕಿ ಕೊಂದ ಸ್ನೇಹಿತೆಯ ಪತಿ!ಘಟನೆ ಕುರಿತು ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


