ಬೆಂಗಳೂರು(ಆನೇಕಲ್): ಯುವರತ್ನ ಪುನೀತ್ ರಾಜ್‍ಕುಮಾರ್ ನಮ್ಮನ್ನಗಲಿ ಈಗಾಗಲೇ ಮೂರು ತಿಂಗಳು ಕಳೆದಿದೆ. ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಅವರನ್ನು ನೆನಪಿಸಿಕೊಳ್ಳುತ್ತಲೇ ಇದ್ದಾರೆ. ಅದೇ ರೀತಿ ಬೆಂಗಳೂರಿನ ಗೊಟ್ಟಿಗೆರೆಯಲ್ಲಿ ಇಂದು ಪುನೀತ್ ರಾಜ್‍ಕುಮಾರ್ ಅವರ ನೆನಪಿಗೋಸ್ಕರ ಮ್ಯಾರಥಾನ್ ಆಯೋಜನೆ ಮಾಡಲಾಗಿತ್ತು.ಚಿಕ್ಕ ಮಕ್ಕಳು ಮಹಿಳೆಯರು ಸೇರಿದಂತೆ ಎಲ್ಲಾ ರೀತಿಯ ವ್ಯಕ್ತಿಗಳು ಸಹ ಮ್ಯಾರಥಾನ್‍ನಲ್ಲಿ ಪಾಲ್ಗೊಂಡು 5 ಕಿಲೋಮೀಟರ್ ಓಡುವ ಮೂಲಕ ಪುನೀತ್ ಅವರನ್ನು ಸ್ಮರಿಸಿದ್ದಾರೆ. ಫ್ಯಾಟ್ ಟು ಫಿಟ್ ಜಿಮ್ ಸೆಂಟರ್ ವತಿಯಿಂದ ಈ ಮ್ಯಾರಥಾನ್ ಆಯೋಜನೆ ಮಾಡಲಾಗಿದ್ದು, ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್‍ಕುಮಾರ್ ತಂದೆ ಹೃದಯಾಘಾತದಿಂದ ನಿಧನಪುನೀತ್ ರಾಜ್‍ಕುಮಾರ್ ಪ್ರೇರಣೆಯಿಂದ ಇಲ್ಲಿಗೆ ಬರುವಬರುವವರಿಗೆ ಫಿಟ್ನೆಸ್ ಬಗ್ಗೆ ಸಲಹೇ ನೀಡುತ್ತಿದ್ದಾರೆ. ಆದರೆ ಇದೀಗ ಅವರ ಅಗಲಿಕೆ ಸಾಕಷ್ಟು ನೋವನ್ನು ರಾಜ್ಯದ ಜನತೆಗೆ ನೀಡಿದ್ದು ಅವರ ಫಿಟ್ನೆಸ್‌ಗೆ ಪ್ರೇರಣೆಗೊಂಡು ಈ ಮ್ಯಾರಥಾನ್ ಆಯೋಜಿನೆ ಮಾಡಲಾಗಿದೆ. ಇದನ್ನೂ ಓದಿ:  ಕೊನೆಗೂ ತನ್ನ ಕನಸು ನೆರವೇರಿತು ಎಂದ ಪ್ರಭಾಸ್ !Sign in to your account
Username or Email Address


Password

 Remember Me


