ಶಿವಮೊಗ್ಗ: ಚುನಾವಣೆ ವೇಳೆ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೇ, ಗೂಂಡಾ ಡಿಕೆಶಿ ಹಾಗೂ ಜಾತಿವಾದಿ ಸಿದ್ದರಾಮಯ್ಯ ಪಕ್ಕಕ್ಕೆ ಸರಿಯುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಡಿಕೆಶಿ ಮತ್ತು ಸಿದ್ದು ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭದ್ರಾವತಿ ತಾಲೂಕಿನ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಬಿಜೆಪಿ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಕೆಲಸ ಮಾಡೋಣ, ಆಗ ಮಾತ್ರ ಗೂಂಡಾಗಳು, ಜಾತಿವಾದಿಗಳು ಎಲ್ಲಿ ಇರುತ್ತಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಗಂಡನ ವೀರ್ಯವನ್ನು ಕೇಕ್‍ನಲ್ಲಿ ಮಿಕ್ಸ್ ಮಾಡಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಶಿಕ್ಷಕಿಗೆ 40 ವರ್ಷ ಜೈಲುಕಳೆದ ಬಾರಿ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಭದ್ರಾವತಿ ತಾಲೂಕಿನಲ್ಲಿ ಬಿಜೆಪಿ ಅತಿ ಹೆಚ್ಚು ಮತ ಪಡೆದಿತ್ತು. ಪಕ್ಷಕ್ಕೆ ಬಂದವರು ತಾ.ಪಂ. ಹಾಗೂ ಜಿ.ಪಂ. ಚುನಾವಣೆ ವೇಳೆ ಟಿಕೇಟ್ ಸಿಗಲಿಲ್ಲ ಅಂತಾ ಮತ್ತೆ ವಾಪಸ್ ಹೋಗಬಾರದು. ಅಂತಹ ತೀರ್ಮಾನವನ್ನು ಇಂದೇ ಮಾಡಬೇಕು. ನೀವುಗಳು ಸರಿಯಾಗಿ ಕೆಲಸ ಮಾಡಿದರೇ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಬಾರಿ ಗೆಲುವು ನಮ್ಮದೇ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.Sign in to your account
Username or Email Address


Password

 Remember Me


