ಇಂದು ತೆರೆ ಕಂಡ ‘ಬೈ ಟು ಲವ್’ ಚಿತ್ರದ ಹೀರೋ ಧನ್ವೀರ್ ಮತ್ತು ಅವರ ಬೌನ್ಸರ್ ಸೇರಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಭಿಮಾನಿಯೊಬ್ಬ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಇದನ್ನೂ ಓದಿ : ಅಪ್ಪು ಹುಟ್ಟುಹಬ್ಬಕ್ಕೆ ಬಿರಿಯಾನಿ ಊಟ, ಹೆಲಿಕಾಪ್ಟರ್ ನಿಂದ ಹೂಮಳೆ : ಇನ್ನೇನಿದೆ ವಿಶೇಷ?
ಗುರುವಾರ (ಫೆ.17) ತಡರಾತ್ರಿ ಬೆಂಗಳೂರಿನ ಎಸ್.ಸಿ ರಸ್ತೆಯ ಅನುಪಮಾ ಚಿತ್ರಮಂದಿರದ ಬಳಿ ಧನ್ವೀರ್ ಮತ್ತು ಅವರ ಅಂಗರಕ್ಷರಿದ್ದರು. ತಡರಾತ್ರಿ ಊಟ ಮುಗಿಸಿಕೊಂಡು ಅದೇ ರಸ್ತೆಯಲ್ಲೇ ಹೊರಟಿದ್ದ ಚಂದ್ರಶೇಖರ್, ನೆಚ್ಚಿನ ನಟನನ್ನು ಕಂಡು ಒಂದು ಫೋಟೋ ಕೇಳಿದ್ದಾರೆ. ಸೆಲ್ಫಿ ಕೊಡಲು ಧನ್ವೀರ್ ನಿರಾಕರಿಸಿದರು ಎನ್ನಲಾಗಿದೆ. ಹಾಗಾಗಿ ಕೋಪಗೊಂಡ ಅಭಿಮಾನಿ ಮತ್ತೆ ಮತ್ತೆ ಫೋಟೋಗಾಗಿ ಪೀಡಿಸಿದ್ದಾನೆ. ಯಾವುದೇ ಕಾರಣಕ್ಕೂ ಅಭಿಮಾನಿಯ ಬೇಡಿಕೆಗೆ ಸ್ಪಂದಿಸದೇ ಇರುವ ಕಾರಣಕ್ಕಾಗಿ ಅಭಿಮಾನಿ ಮತ್ತು ಧನ್ವೀರ್ ಅವರ ಅಂಗರಕ್ಷಕರ ನಡುವೆ ಮಾತಿನ ಸಮರವೇ ನಡೆದು, ಆನಂತರ ಅಭಿಮಾನಿ ಮೇಲೆ ಹಲ್ಲೆ ನಡೆದಿದೆ ಎಂದು ದೂರಿನಲ್ಲಿ ದಾಖಲಾಗಿದೆ. ಇದನ್ನೂ ಓದಿ : ವೈರಲ್ ಆಯ್ತು ಕಿಚ್ಚನ ಮನೆಯ ಸ್ಕೂಟಿ ಟೇಬಲ್
ಈ ಕುರಿತು ಧನ್ವೀರ್ ಈವರೆಗೂ ಯಾವುದೇ ಪ್ರತಿಕ್ರಿಯೆ ಕೂಡ ನೀಡಿಲ್ಲ. ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದ್ದರಿಂದ, ಧನ್ವೀರ್ ಪೊಲೀಸ್ ಠಾಣೆಗೆ ಬರುವ ಅನಿವಾರ್ಯತೆ ಎದುರಾಗಿದೆ.Sign in to your account
Username or Email Address


Password

 Remember Me


