ಧಾರವಾಡ: ರಾಷ್ಟ್ರ ಧ್ವಜದ ಕುರಿತಾಗಿ ಸಚಿವ ಕೆಎಸ್ ಈಶ್ವರಪ್ಪ ನೀಡಿದ ಹೇಳಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡದ ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ತೆರಳಿ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈಶ್ವರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗಿ ಅಂತಾರೆ, ಪಾಕ್ ಇವರಪ್ಪನ ಮನೆನಾ..? – ರಾಜಕಾರಣಿಗಳ ವಿರುದ್ಧ ಉಡುಪಿ ವಿದ್ಯಾರ್ಥಿನಿಯರ ಕಿಡಿಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಘೋಟಣೆ ಕೂಗಿದ್ದಾರೆ. ರಾಷ್ಟ್ರ ಧ್ವಜ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಈಶ್ವರಪ್ಪ ವಿರುದ್ಧ ಮುಖ್ಯಮಂತ್ರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗೋದಾದ್ರೆ ಸ್ವಾಗತಿಸುತ್ತೇನೆ: ರಘುಪತಿ ಭಟ್Sign in to your account
Username or Email Address


Password

 Remember Me


