ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ. ಇದನ್ನೂ ಓದಿ : ಭೋಜಪುರಿ ಚಿತ್ರರಂಗದಲ್ಲಿ ಕನ್ನಡ ನಾಯಕಿಯರ ಕಲರವ“ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ. ಇದನ್ನು ಓದಿ :ಗ್ಯಾಂಗ್ ಸ್ಟಾರ್ ಅವತಾರದಲ್ಲಿ ದೊಡ್ಮನೆ ಕುಡಿ
ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ವಿಕ್ರಾಂತ್ ರೋಣ’ ಸಿನಿಮಾದ ಕೆಲಸ ಬಹುತೇಕ ಮುಗಿದಿದೆ. ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕೋವಿಡ್ ಮತ್ತು ಸರಕಾರದ ಕೆಲ ನಿಯಮಗಳಿಂದಾಗಿ ಬಿಡುಗಡೆ ಎರಡೆರಡು ಬಾರಿ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಈ ಬಾರಿ ಪಕ್ಕಾ ದಿನಾಂಕವನ್ನು ಗೊತ್ತು ಮಾಡಿಕೊಂಡು ಅಖಾಡಕ್ಕೆ ಇಳಿಯಲಿದೆಯಂತೆ ಚಿತ್ರತಂಡ. ಇದನ್ನೂ ಓದಿ : ಈ ವರ್ಷ ಯಾರೆಲ್ಲ ನಟರು ನಿರ್ದೇಶನ ಮಾಡಲಿದ್ದಾರೆ ಗೊತ್ತಾ?
ಅನೂಪ್ ಭಂಡಾರಿ ಜತೆ ಸುದೀಪ್ ಅವರು ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಅದನ್ನು ಇಷ್ಟು ಬೇಗ ಸುದೀಪ್ ಅವರು ಬಹಿರಂಗ ಪಡಿಸುತ್ತಾರೆ ಅಂದುಕೊಂಡಿರಲಿಲ್ಲ. ಸುದ್ದಿ ಬಹಿರಂಗವಾಗಿದ್ದರೂ, ಸಿನಿಮಾ ಆಗುವುದು ಸದ್ಯಕ್ಕಂತೂ ಅಲ್ಲ.Sign in to your account
Username or Email Address


Password

 Remember Me


