ಬೆಳಗಾವಿ: ನಗರದ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ 12 ಜನ ವಿದ್ಯಾರ್ಥಿಗಳು ಹಿಜಬ್, ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸಿ, ಹೈಕೋರ್ಟ್ ಮಧ್ಯಂತರ ಆದೇಶ ಡಿಪ್ಲೊಮಾ, ಡಿಗ್ರಿ ಕಾಲೇಜ್‍ಗೆ ಅನ್ವಯವಾಗುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ.ಬೆಳಗಾವಿ ಸದಾಶಿವ ನಗರದಲ್ಲಿರುವ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್ ವಿವಾದ ಮುಂದುವರೆದಿದೆ. ನಿನ್ನೆ ಹಿಜಬ್‍ಗೆ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜ್ ಸಿಬ್ಬಂದಿ ಹೈಕೋರ್ಟ್ ಆದೇಶ ಪಾಲಿಸುವಂತೆ ಹೇಳಿದ್ದರು. ಆದ್ರೆ, ಇದಕ್ಕೆ ಕ್ಯಾರೆ ಎನ್ನದೆ ವಿದ್ಯಾರ್ಥಿಗಳು ಕೆಲ ಹೊತ್ತು ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಕೋರ್ಟ್ ಆದೇಶ ಡಿಪ್ಲೊಮಾ, ಡಿಗ್ರಿ ಕಾಲೇಜ್‍ಗೆ ಮಧ್ಯಂತರ ಆದೇಶ ಪಾಲನೆ ಅನ್ವಯ ಆಗುವುದಿಲ್ಲ ಎಂದು ಪ್ರತಿಯನ್ನು ಹಿಡಿದುಕೊಂಡು ಬಂದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಜಬ್ ಹೈಡ್ರಾಮಾ – ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು ವಶಸ್ಥಳಕ್ಕೆ ಆಗಮಿಸಿದ ಕಾಲೇಜಿನ ಪ್ರಾಂಶುಪಾಲರು ಪ್ರಕಾಶ್ ಪಾಟೀಲ್ ಕಾಲೇಜಿನ ಕೊಠಡಿಗೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಯರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ. ಆದರೆ ನಾವು ಯಾವುದೇ ಕಾರಣಕ್ಕೆ ಹಿಜಬ್ ತೆಗೆಯಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯಾ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ. ಸ್ಥಳದಲ್ಲಿ ಡಿಸಿಪಿ ರವೀಂದ್ರ ಗಡಾದಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ






 Advertisement 




Sign in to your account
Username or Email Address


Password

 Remember Me


