ಬೆಂಗಳೂರು: ನನ್ನ ಗನ್‌ ಮ್ಯಾನ್‌ (Gun Man) ಮೇಲೆ ಹಲ್ಲೆ ನಡೆದ ವಿಚಾರ ನನಗೆ ಗೊತ್ತಿಲ್ಲ ಎಂದು ಮದ್ದೂರು ಕಾಂಗ್ರೆಸ್‌ ಶಾಸಕ (Congress MLA) ಕದಲೂರು ಉದಯ್ ಗೌಡ (Kadalur Uday Gowda) ಹೇಳಿದ್ದಾರೆ.ಲೋಕಸಭಾ ಚುನಾವಣೆಯ ಸಮಯದಲ್ಲಿ ದರ್ಶನ್‌ ಗ್ಯಾಂಗ್‌ (Darshan Gang) ಸದಸ್ಯರು ಗನ್‌ಮ್ಯಾನ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಮಾಧ್ಯಮಗಳ ಜೊತೆ ಅವರು ಪ್ರತಿಕ್ರಿಯಿಸಿದರು.ಹಲ್ಲೆಯಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ನನ್ನ ಗಮನಕ್ಕೆ ಬಂದಿಲ್ಲ. ನನ್ನ ಗನ್ ಮ್ಯಾನ್ ದೂರು ಕೊಟ್ಟಿಲ್ಲ. ನಾನು ಮಧ್ಯಸ್ಥಿಕೆ ಮಾಡಿದ್ದೇನೆ ಎನ್ನುವುದು ಸುಳ್ಳು ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌ ಇಲ್ಲಿಯವರೆಗೆ ನಾನು 5 ಮಂದಿ ಗನ್ ಮ್ಯಾನ್‌ಗಳನ್ನು ಬದಲಾವಣೆ ಮಾಡಿದ್ದೇನೆ. ಅದರಲ್ಲಿ ಯಾವ ಗನ್ ಮ್ಯಾನ್ ಗೊತ್ತಿಲ್ಲ. ದರ್ಶನ್ ನನ್ನ ಜತೆ ಬರೋವಾಗ ಅವರೊಬ್ಬರೇ ಬರುತ್ತಿದ್ದರು. ಜಗಳ ಮಾಡುವವರು ಬಂದಿಲ್ಲ. ಜಗಳ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!ಏನಿದು ಹಲ್ಲೆ ಆರೋಪ?
ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ದರ್ಶನ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ಪರ ಪ್ರಚಾರಕ್ಕೆ ಮಂಡ್ಯಕ್ಕೆ (Mandya) ಆಗಮಿಸಿದ್ದರು. ಏಪ್ರಿಲ್ 22 ರಂದು ಮದ್ದೂರು (Madduru) ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸುತ್ತಿದ್ದಾಗ ಮದ್ದೂರು ಶಾಸಕ ಉದಯ್ (MLA Uday) ಅವರ ಗನ್‌ ಮ್ಯಾನ್‌ ಆಗಿದ್ದ ನಾಗೇಶ್ (Nagesh) ಜೊತೆ ದರ್ಶನ್ ಪಟಾಲಂ ಗಲಾಟೆ ನಡೆಸಿದ್ದ ಆರೋಪ ಬಂದಿತ್ತು. ಮುಖಂಡರನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಡಿಎಆರ್ ಪೇದೆ ನಾಗೇಶ್ ಜೊತೆ ಜಗಳ ಮಾಡಿದ್ದರು. ಇದೇ ಜಗಳ ಮುಂದುವರಿಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ ಅವರ ಮೇಲೆ ಹಲ್ಲೆ ಮಾಡಿತ್ತು. ಪೊಲೀಸರು ನಮ್ಮನ್ನ ಏನು ಮಾಡಲು ಆಗಲ್ಲ. ನಮ್ಮ ಹತ್ತಿರ ಏನು ಕಿತ್ತುಕೊಳ್ಳಲು ಆಗಲ್ಲ ಎಂದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದವರ ವಿರುದ್ಧ ಕೆಸ್ತೂರು ಪೊಲೀಸ್ ಠಾಣೆಗೆ ನಾಗೇಶ್‌ ಅವರು ದೂರು ನೀಡಲು ಹೋಗಿದ್ದರು. ಅಷ್ಟೇ ಅಲ್ಲದೇ ಮದ್ದೂರಿನ ತಾಲೂಕು ಆಸ್ಪತ್ರೆಯಲ್ಲಿ ನಾಗೇಶ್‌ ಅವರಿಗೆ ಚಿಕಿತ್ಸೆ ಸಹ ನಡೆದಿತ್ತು.ಈ ವಿಚಾರ ದೊಡ್ಡದಾಗುತ್ತಿದ್ದಂತೆ ಶಾಸಕ ಉದಯ್ ಅವರು ರಾಜಿ ಸಂಧಾನ ಮಾಡಿ ನಾಗೇಶ್‌ ಅವರನ್ನು ಮನವೊಲಿಸಿದ್ದರು. ನಂತರ ಉದಯ್ ಗನ್‌ ಮ್ಯಾನ್ ಹುದ್ದೆಯಿಂದ ಹೊರಬಂದಿದ್ದ ನಾಗೇಶ್ ಅವರು ಈಗ ಡಿಎಆರ್ ತುಕಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. Sign in to your account
Username or Email Address


Password

 Remember Me


