ಕಲಬುರಗಿ: ಹಿಜಬ್ ತಂಟೆಗೆ ಬಂದರೆ ನಿಮ್ಮನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕೆಲದಿನಗಳ ಹಿಂದೆ ಹಿಜಬ್ ತಂಟೆಗೆ ಬಂದರೆ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಆಂದೋಲಾ ಸ್ವಾಮಿಯನ್ನು ತುಂಡು, ತುಂಡು ಮಾಡಿ ಕತ್ತರಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಕ್ರಂ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಬಳಿಕ ಇದೀಗ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದ ಅಲಿಗಢ ಕಾಲೇಜಿನಲ್ಲಿ ಹಿಜಬ್‌ ಬ್ಯಾನ್‌
 Advertisement 




 Advertisement 



ಹಿಂದೂಪರ ಸಂಘಟನೆಗಳು ಠಾಣೆಯ ಬಳಿ ಪ್ರತಿಭಟನೆ ನಡೆಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ಇದೀಗ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದುಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಹಿನ್ನೆಲೆ ಐಪಿಸಿ ಸೆಕ್ಷನ್ (153), (294) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೋರ್ಟ್‌ ಹೊರಗಡೆ ಹಿಜಬ್‌ ವಿವಾದ ಇತ್ಯರ್ಥಕ್ಕೆ ಅನುಮತಿ ಕೋರಿ ಅರ್ಜಿ
 Advertisement 











 Advertisement 




ಕೆಲದಿನಗಳ ಹಿಂದೆ ಹಿಜಬ್ ತಂಟೆಗೆ ಬಂದರೆ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಆಂದೋಲಾ ಸ್ವಾಮಿಯನ್ನು ತುಂಡು, ತುಂಡು ಮಾಡಿ ಕತ್ತರಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಕ್ರಂ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಬಳಿಕ ಇದೀಗ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದ ಅಲಿಗಢ ಕಾಲೇಜಿನಲ್ಲಿ ಹಿಜಬ್‌ ಬ್ಯಾನ್‌ಹಿಂದೂಪರ ಸಂಘಟನೆಗಳು ಠಾಣೆಯ ಬಳಿ ಪ್ರತಿಭಟನೆ ನಡೆಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ಇದೀಗ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದುಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಹಿನ್ನೆಲೆ ಐಪಿಸಿ ಸೆಕ್ಷನ್ (153), (294) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೋರ್ಟ್‌ ಹೊರಗಡೆ ಹಿಜಬ್‌ ವಿವಾದ ಇತ್ಯರ್ಥಕ್ಕೆ ಅನುಮತಿ ಕೋರಿ ಅರ್ಜಿ






 Advertisement 




Sign in to your account
Username or Email Address


Password

 Remember Me


