ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಜಗಳವಾಡಿದ್ದು, ಪರಿಣಾಮ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಸುರೇಂದ್ರ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!ಸ್ನೇಹಾ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತಳ ಪೋಷಕರು ಹಾಗೂ ಸಂಬಂಧಿಕರ ಆಗಮನಕ್ಕಾಗಿ ಕಾದಿದ್ದು, ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.Sign in to your account
Username or Email Address


Password

 Remember Me


