ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿ 4ರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿ ಕಾರುಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಪ್ರಶಾಂತ್ ಕೊಲಾರಗಿ (24) ಅಥಣಿ ಮೂಲದ ಶ್ರಧ್ಧಾ ತೆಲಸಂಗಮಠ (20) ಮೃತ ದುರ್ದೈವಿಗಳು. ಇವರು ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಲೆರೋ ಕಾರು ನಿಪ್ಪಾಣಿಯಿಂದ ವೇಗವಾಗಿ ಬರುತ್ತಿದ್ದು ಸ್ವಿಫ್ಟ್ ಕಾರುಗೆ ಡಿಕ್ಕಿ ಹೊಡೆದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಸಂಕೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಂಕೇಶ್ವರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈ, ಕಾಲು ಕಟ್ಟಿ ಹಾಕಿ ಸಿನಿಮೀಯ ರೀತಿಯಲ್ಲಿ ಮನೆಗಳ ದರೋಡೆSign in to your account
Username or Email Address


Password

 Remember Me


