ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಹಿಜಬ್‍ಗಾಗಿ ಪಟ್ಟು ಹಿಡಿದ ಕೆಲ ವಿದ್ಯಾರ್ಥಿನಿಯರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.13 ಮಂದಿ ವಿದ್ಯಾರ್ಥಿಗಳು ಬುರ್ಖಾ ಸಮೇತ ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಹೀಗಾಗಿ ಹಿಜಬ್ ಧರಿಸಿ ಆಗಮಿಸಿದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಹಿಜಬ್ ತೆಗದು ಸಮವಸ್ತ್ರದಲ್ಲಿ ತರಗತಿಗೆ ತೆರಳುವಂತೆ ಸೂಚಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ನಾವು ಹಿಜಬ್ ತೆಗೆಯುವುದಿಲ್ಲ. ಹಾಗೆಯೇ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು. ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿಗೆ ಡಿಕ್ಕಿ – ನಾಲ್ವರ ಸಾವುಅಧಿಕಾರಿಗಳು 1 ಗಂಟೆಗೂ ಹೆಚ್ಚು ಕಾಲ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ ನ್ಯಾಯಾಲಯದ ಆದೇಶ ಹಾಗೂ ಸರ್ಕಾರದ ನಿರ್ಧಾರದ ಬಗ್ಗೆ ಗಮನಕ್ಕೆ ತಂದು ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೆ ಹಿಜಬ್ ತೆಗೆದು ವಿದ್ಯಾರ್ಥಿಗಳು ತರಗತಿಗೆ ತೆರಳಿದ್ದಾರೆ. ಇನ್ನೂ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳಲ್ಲಿ ಹಿಜಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲಿರಿಸಿ ಕೊಠಡಿಯಲ್ಲಿ ಹಿಜಬ್ ತೆಗೆದು ತದನಂತರ ತರಗತಿಗೆ ತೆರಳಲು ಅವಕಾಶ ಮಾಡಿಕೊಡಲಾಗುತ್ತಿದೆ. ಇದನ್ನೂ ಓದಿ: ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲSign in to your account
Username or Email Address


Password

 Remember Me


