ಬೆಂಗಳೂರು: ನಟಿ ಮೀರಾ ಜಾಸ್ಮಿನ್ ಬೋಲ್ಡ್ ಆಗಿ ಪೋಸ್ ಕೊಟ್ಟು ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.ಮಲಯಾಳಂ, ಕನ್ನಡ, ತಮಿಳು, ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿದ ನಟಿ ಮೀರಾ ಮೀರಾ ಜಾಸ್ಮಿನ್‌ಗೆ ಇಂದು (ಫ.15) ಜನ್ಮದಿನದ ಸಂಭ್ರಮ. ಅವರಿಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಅಭಿಮಾನಿಗಳು, ಆತ್ಮೀಯರು ಶುಭಾಶಯಗಳನ್ನು ತಿಳಿಸಿದ್ದಾರೆ. ಇತ್ತಿಚೆಗಷ್ಟೇ ಇನ್‍ಸ್ಟಾಗ್ರಾಮ್‍ಗೆ ಎಂಟ್ರಿ ಕೊಟ್ಟಿರುವ ಮೀರಾ, ಹುಟ್ಟಿದ ಹಬ್ಬದ ದಿನದಂದು ವಿಶೇಷ ಫೋಟೋಗಳನ್ನು ಅಪ್ಲೋಡ್‌ ಮಾಡಿದ್ದಾರೆ.ಸಖತ್ ಬೋಲ್ಡ್ ಅವತಾರದಲ್ಲಿ ಅವರು ಕಾಣಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. 40ರ ಹರೆಯದಲ್ಲೂ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿರುವ ಅವರ ಫೋಟೋಗಳನ್ನು ನೋಡಿ, ಫ್ಯಾನ್ಸ್ ಫಿದಾ ಆಗಿದ್ದಾರೆ. ಅಂದಹಾಗೆ, ಕಳೆದ 3-4 ವರ್ಷಗಳಿಂದ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡಿದ್ದ ಮೀರಾ, ಈಗ ಪುನಃ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಮಲಯಾಳಂ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:  ಸ್ಯಾಂಡಲ್‍ವುಡ್ ಪದ್ಮಾವತಿ ರಮ್ಯಾ ಕಮ್ ಬ್ಯಾಕ್ ಪಕ್ಕಾ  A post shared by Meera Jasmine (@meerajasmine)2001ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಮೀರಾ ಚತುರ್ಭಾಷಾ ತಾರೆಯಾಗಿ ಮಿಂಚಿದ್ದಾರೆ. ಮೌರ್ಯ ಚಿತ್ರದ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡಿದ್ದರು. 2014ರಲ್ಲಿ ದುಬೈ ಮೂಲದ ಅನಿಲ್ ಜೊತೆಗೆ ಮೀರಾ ಮದುವೆಯಾದ ಬಳಿಕ ಮೂರ್ನಾಲ್ಕು ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿದ್ದರು. ಮೀರಾ ಪುನಃ ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಂದನವನದಲ್ಲಿ ಲವ್ಲಿ ವ್ಯಾಲೆಂಟೈನ್ಸ್ ಡೇ – ಅಭಿಮಾನಿಗಳೊಂದಿಗೆ ಹಂಚಿಕೊಂಡ್ರು ಸ್ಪೆಷಲ್ ಫೋಟೋ!Sign in to your account
Username or Email Address


Password

 Remember Me


