ಕಲಬುರಗಿ: ಹಿಜಬ್‌ ಧರಿಸಲು ಅವಕಾಶ ನೀಡದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯರು ಉರ್ದು ಶಾಲೆಗೆ ಗೈರಾಗಿದ್ದಾರೆ.ಕಲಬುರಗಿ ನಗರದ ಜಗತ್ ಬಳಿಯಿರುವ ಉರ್ದು ಶಾಲೆಯ 8, 9, 10ನೇ ತರಗತಿಯಲ್ಲಿ ಓದುತ್ತಿದ್ದ 80ಕ್ಕೂ ಅಧಿಕ ವಿದ್ಯಾರ್ಥಿಗಳು ಇಂದು ತರಗತಿಗೆ ಹಾಜರಾಗಿಲ್ಲ. ಉರ್ದು ಶಾಲೆಯ ತರಗತಿಗಳು ಖಾಲಿಯಾಗಿದ್ದು ಶಿಕ್ಷಕರು ಮಾತ್ರ ಎಂದಿನಂತೆ ಶಾಲೆಗೆ ಆಗಮಿಸಿದ್ದಾರೆ.ಸೋಮವಾರ ಹೈಕೋರ್ಟ್ ಆದೇಶವನ್ನು ಧಿಕ್ಕರಸಿ ಜೇವರ್ಗಿಯ ಉರ್ದು ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ಹಿಜಬ್ ಧರಿಸಿ ಆಗಮಿಸಿದ್ದರು.ವಿದ್ಯಾರ್ಥಿಗಳು ಹಿಜಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸುವಂತಿಲ್ಲ ಅಂತ ಹೈಕೋರ್ಟ್ ಸೂಚಿಸಿದ್ದರೂ ಸಮವಸ್ತ್ರ ನಿಯಮ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರಗೊಂಡಿತ್ತು. ಇದನ್ನೂ ಓದಿ: ಕೊಪ್ಪಳದಲ್ಲಿ ಶಾಲೆಗೆ ಹಿಜಬ್ ಹಾಕಿಕೊಂಡೇ ಬಂದ ವಿದ್ಯಾರ್ಥಿನಿಯರುಸುದ್ದಿ ಪ್ರಸಾರವಾದ ಬೆನ್ನಲ್ಲೇ ಶಿಕ್ಷಕರು ಮಕ್ಕಳಿಗೆ ತಿಳಿ ಹೇಳಿ ಹಿಜಬ್ ತೆಗೆಯುವಂತೆ ಸೂಚಿಸಿದ್ದರು. ಶಿಕ್ಷಕರ ಮಾತಿಗೆ ಬೆಲೆ ಕೊಟ್ಟು ವಿದ್ಯಾರ್ಥಿಗಳು ಹಿಜಬ್ ತೆಗೆದು ಈಗ ಪಾಠ ಕೇಳಿ ಮನೆಗೆ ತೆರಳಿದ್ದರು.ಈ ಬಗ್ಗೆ ಸೋಮವಾರ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ್ದ ಶಿಕ್ಷಕ, ನಾವು ವಿದ್ಯಾರ್ಥಿನಿಯರಿಗೆ ಹೈಕೋರ್ಟ್‌ ಆದೇಶದ ಬಗ್ಗೆ ಮೊದಲೇ ತಿಳಿಸಿದ್ದೆವು. ನಮ್ಮಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಹಳ್ಳಿಯಿಂದ ಬರುತ್ತಾರೆ. ಅವರಿಗೆ ನಿಯಮಗಳ ಬಗ್ಗೆ ಹೆಚ್ಚಾಗಿ ತಿಳಿದಿರದ ಕಾರಣ ಹಿಜಬ್ ಧರಿಸಿಯೇ ಶಾಲೆಯ ಆವರಣ ಪ್ರವೇಶಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂಈ ವಿದ್ಯಾ ಸಂಸ್ಥೆಗೆ ಬರುವ ಎಲ್ಲಾ ವಿದ್ಯಾರ್ಥಿನಿಯರೂ ಮುಸ್ಲಿಂ ಸಮುದಾಯದವರು. ನಾವು 2-3 ದಿನಗಳ ಹಿಂದೆಯೇ ಸರ್ಕಾರದ ಆದೇಶದ ಬಗ್ಗೆ ಅವರಿಗೆ ಸೂಚನೆ ನೀಡಿದ್ದೆವು. ಅವರು ತರಗತಿ ಸಮಯಕ್ಕಿಂತ ಮೊದಲೇ ಶಾಲಾ ಆವರಣ ಪ್ರವೇಶಿಸಿದ್ದರಿಂದ ಎಚ್ಚರಿಕೆ ನೀಡುವಲ್ಲಿ ವಿಳಂಬವಾಗಿತ್ತು ಎಂದು ಹೇಳಿದ್ದರು.Sign in to your account
Username or Email Address


Password

 Remember Me


