ಮಂಗಳೂರು: ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿಯೊಬ್ಬರು ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವೇಳೆ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ದೇರಳಕಟ್ಟೆಯಲ್ಲಿ ನಡೆದಿದೆ.ಉಪ್ಪಿನಂಗಡಿ ನಿವಾಸಿ ನಾಗೇಶ್ (23) ಮೃತ ವಿದ್ಯಾರ್ಥಿ. ನಾಗೇಶ್ ಅವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದು, ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ನಾನು ಮತ್ತೆ ಶಾಸಕನಾದ್ರೆ ಮುಸ್ಲಿಮರು ಟೋಪಿ ತೆಗೆದು ತಿಲಕ ಇಡುವಂತೆ ಮಾಡ್ತೀನಿ: ಬಿಜೆಪಿ ಶಾಸಕಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


