ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ (Petrol price hike) ಮಾಡಿದ್ದಕ್ಕೆ ಬಿಜೆಪಿ (BJP) ಹಾಗೂ ಜೆಡಿಎಸ್‍ನವರು (JDS) ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ಬೆಲೆ ಏರಿಕೆ ಬಗ್ಗೆ ಕೇಂದ್ರದ ಮೇಲೆ ಹೇಳಿಕೆ ಕೊಟ್ಟಿದ್ದರು. ನಾನು ಪ್ರಧಾನಿ ಆದ್ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸ್ತೀವಿ ಎಂದಿದ್ದರು. ಅದಕ್ಕೆ ವಿರುದ್ಧವಾಗಿ ಈಗ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆದಾಗ ಪೆಟ್ರೋಲ್ ಬೆಲೆ 72.26 ರೂ. ಇತ್ತು, ಜೂನ್ 2024ರಲ್ಲಿ 104 ರೂ.ಪಾಯಿ ಆಗಿತ್ತು, ಡೀಸೆಲ್ ಬೆಲೆ 57 ರೂ. ಇತ್ತು, ಈಗ 98 ರೂ.ಆಗಿದೆ. ಈಗ ಹೇಳಿ, ಬೆಲೆ ಹೆಚ್ಚು ಮಾಡಿದ್ದು ಯಾರು ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದುರಹಂಕಾರ ಬಿಟ್ಟು ಜನಪರ ಆಡಳಿತ ನೀಡಿ- ಸಿಎಂ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್ ಇತ್ತು, ಈಗ 82.35 ಡಾಲರ್ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆ ಆದರೆ ದೇಶದಲ್ಲೂ ಬೆಲೆ ಇಳಿಸಬೇಕು ಅಲ್ವಾ? ಈಗ ಬಿಜೆಪಿಯವರು ಯಾರ ವಿರುದ್ಧ ಪ್ರತಿಭಟಿಸಬೇಕು? ಕೇಂದ್ರ ಸರ್ಕಾರದ ಮೇಲೆ ಅಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ.ಕೇಂದ್ರ ಸರ್ಕಾರ ಜಿಎಸ್‍ಟಿ ತಂದಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಅಧಿಕಾರ ಇಲ್ಲ. ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸೆಸ್ ವಿಧಿಸುವ ಅಧಿಕಾರ, ಅಬಕಾರಿ ಸುಂಕ, ಸ್ಟ್ಯಾಂಪ್ ಡ್ಯೂಟಿ ವಿಧಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇದೆ. ಉಳಿದೆಲ್ಲ ತೆರಿಗೆಯನ್ನು ಅವರೇ ವಿಧಿಸ್ತಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.ಕರ್ನಾಟಕ ಸರ್ಕಾರ ಪಾಪರ್ ಆಗಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿಕೆ ವಿಚಾರವಾಗಿ, ಪಾಪರ್ ಎಂದು ಘೋಷಿಸಿದ್ದು ಯಾರು? ಪಾಪರ್ ಅಂದ್ರೆ ಅರ್ಥ ಗೊತ್ತಾ ಅಶೋಕನಿಗೆ? ನಾವು ಯಾರಿಗಾದರೂ ವೇತನ ಕೊಡೋದು ನಿಲ್ಲಿಸಿದ್ದೇವಾ? ಎಂದು ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.ಇನ್ನೂ ಕೇಂದ್ರದ ವಿಶೇಷ ಅನುದಾನದ ವಿಚಾರವಾಗಿ, 5,495 ಕೋಟಿ ರೂ. ತೆರಿಗೆ ಪಾಲು ಕಡಿಮೆಯಾಗಿದೆ. ವಿಶೇಷ ಅನುದಾನ ಘೋಷಣೆ ಮಾಡಿ ರಾಜ್ಯಕ್ಕೆ ಹಣ ಕೊಡಲಿಲ್ಲ. ನಿರ್ಮಲಾ ಸೀತಾರಾಮನ್ ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿಲ್ಲ. ಭದ್ರಾ ಮೇಲ್ದಂಡೆ, ಬೆಂಗಳೂರು ಪೆರಿಫಿರಲ್ ರಿಂಗ್ ರೋಡ್‍ಗಳ ಯೋಜನೆಗೆ ವಿಶೇಷ ಅನುದಾನ ನೀಡಿಲ್ಲ. ಇವರು ಯಾರ ಬಗ್ಗೆ ಪ್ರತಿಭಟನೆ ಮಾಡಬೇಕು ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸ್ಪೀಕರ್‌ ಹುದ್ದೆ ಬಿಜೆಪಿಗೆ, ಡೆಪ್ಯೂಟಿ ಸ್ಪೀಕರ್‌ ಹುದ್ದೆ ಎನ್‌ಡಿಎ ಮಿತ್ರ ಪಕ್ಷಕ್ಕೆ?Sign in to your account
Username or Email Address


Password

 Remember Me


