ಶಿವಮೊಗ್ಗ: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ (M.B Bhanuprakash) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ನಗರದ (Shivamogga) ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.ಮೃತರ ಸ್ವಗ್ರಾಮ ಮತ್ತೂರಿಗೆ ಮೃತದೇಹವನ್ನು ರವಾನೆ ಮಾಡಲಾಗಿದೆ.


 Advertisement 







 Advertisement 




Sign in to your account
Username or Email Address


Password

 Remember Me


