ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ (Congress) ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ಹೊರಹಾಕಿದರು.ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸ್ಕೂಟರ್ ಶವಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉತ್ತರ ಭಾರತಕ್ಕೆ ಹೋಲಿಸಿದ್ರೆ ದಕ್ಷಿಣ ಭಾರತದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೆಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೋ ರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್‌ನಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್‌ಗೆ ಮಾನವಿದ್ದರೆ ದರ ಏರಿಕೆ ವಾಪಸ್ ಪಡೆಯಲಿ ಎಂದು ಆಗ್ರಹಿಸಿದರು.Sign in to your account
Username or Email Address


Password

 Remember Me


