ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ (Darshan) ಅವರ ವಿಚಾರ ಕುರಿತು ನಟ ಕಿಚ್ಚ ಸುದೀಪ್‌ (Kichcha Sudeep) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನಿನ ಬಲೆ ಅಂದ್ರೆ ತಪ್ಪಾಗುತ್ತೆ. ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರೋ ಅದರಿಂದಲೇ ನಾನು ತಿಳಿದುಕೊಳ್ಳುತ್ತಿದ್ದೇನೆ. ಸತ್ಯಾಂಶ ಹೊರತರಬೇಕು ಅನ್ನೋ ನಿಟ್ಟಿನಲ್ಲಿ ಮಾಧ್ಯಮಗಳು, ಪೊಲೀಸರು ತುಂಬಾ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.ಸಿಎಂ ಅವರು ಹಠ ಹಿಡಿದು ಕುಳಿತಿದ್ದಾರೆ ಅಂದ್ರೆ, ಸರಿಯಾದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಅರ್ಥ. ನಾನು ಅವರ ಪರ ಇವರ ಪರ ಮಾತಾಡೋದಿಲ್ಲ. ಒಟ್ಟಿನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ, ಅವ್ರ ಪತ್ನಿ, ಮಗುವಿಗೆ ನ್ಯಾಯ ಸಿಗಬೇಕು, ಚಿತ್ರರಂಗಕ್ಕೆ ನ್ಯಾಯ ಸಿಗಬೇಕು ಎಂದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂರು ಫ್ಲೋರ್‌ನ ಡ್ಯೂಪ್ಲೆಕ್ಸ್ ಮನೆಯಲ್ಲಿ ವಾಸ- ಪವಿತ್ರಾ ಐಷಾರಾಮಿ ಜೀವನ ಬಹಿರಂಗಇಂದು ಒಂದಿಲ್ಲೊಂದು ವಿಚಾರಗಳಿಗೆ ಚಿತ್ರರಂಗದ ಹೆಸರು ಬರುತ್ತಿದೆ. ಜನ ಬರ್ತಿಲ್ಲ ಅಂದ್ರೆ ಚಿತ್ರರಂಗ, ಸಿನಿಮಾ ಚೆನ್ನಾಗಿಲ್ಲ ಅಂದ್ರೆ ಚಿತ್ರರಂಗ, ಈಗ ಏನೋ ನಡೀತಿದೆ, ಅದಕ್ಕೂ ಚಿತ್ರರಂಗ ಅಂತಾರೆ. ಹಾಗಾಗಿ ಚಿತ್ರರಂಗಕ್ಕೆ ಕ್ಲಿನ್ ಚಿಟ್ ಸಿಗ್ಬೇಕು. ತಪ್ಪತಸ್ಥರಿಗೆ ಶಿಕ್ಷೆ ಆಗ್ಬೇಕು. ಬ್ಯಾನ್ ಮಾಡಬೇಕು ಅನ್ನೋದು ಮುಖ್ಯ ಅಲ್ಲ. ಬ್ಯಾನ್ ಅಂದ್ರೆ ಏನು? ಚೇಂಬರ್ ಇರೋದು ನ್ಯಾಯ ಕೊಡಿಸೋಕೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು – ಮನೆಯ ಮೂಲೆಮೂಲೆಯನ್ನೂ ಜಾಲಾಡಿದ ಅಧಿಕಾರಿಗಳು Sign in to your account
Username or Email Address


Password

 Remember Me


