ಮೈಸೂರು: ಮಹಿಷ ಮಂಡಲೋತ್ಸವ ವರ್ಸಸ್ ಚಾಮುಂಡಿ ಚಲೋ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿನ (Mysuru) ಚಾಮುಂಡಿ ಬೆಟ್ಟದಲ್ಲಿ (Chamundi Hill) ನಿಷೇಧಾಜ್ಞೆ ಜಾರಿಯಾಗಿದೆ.ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಚಾಮುಂಡಿ ತಾಯಿ ದರ್ಶನಕ್ಕೆ ಯಾರಿಗೂ ಇವತ್ತು ಅವಕಾಶ ಇಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ಸರಣಿ ಅಪಘಾತ – ನಾಲ್ವರು ಮಕ್ಕಳು ಸೇರಿ 7 ಮಂದಿ ದುರ್ಮರಣಮಹಿಷ ದಸರಾ ಆಚರಣಾ ಸಮಿತಿಯು ಇಂದು ಮಹಿಷ ದಸರಾ (Mahisha Dasara) ಆಚರಣೆಗೆ ಕರೆ ನೀಡಿತ್ತು. ಬೆಳಗ್ಗೆ 10:30ಕ್ಕೆ ಚಾಮುಂಡಿಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಪುರಭವನದ ಹೊರಾವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿತ್ತು.ಈ ವೇಳೆ ಯಾವುದೇ ಮೆರವಣಿಗೆ, ಬೈಕ್ ರ್‍ಯಾಲಿ ನಡೆಸುವುದು, ಪರ-ವಿರೋಧ ಘೋಷಣೆ ಕೂಗುವುದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು, 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು, ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು ಹಾಗೂ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ದ್ವನಿವರ್ಧಕ ಬಳಸುವುದು, ಫ್ಲೆಕ್ಸ್, ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನೂ ಓದಿ: ಇಸ್ರೇಲಿ ದಾಳಿ; ಒಂದೇ ದಿನ 33 ಮಂದಿ ಸಾವು, 195 ಮಂದಿಗೆ ಗಾಯSign in to your account
Username or Email Address


Password

 Remember Me


