ಯಾದಗಿರಿ: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ (Actor Darshan) ಅವರ ಅಭಿಮಾನಿಯೊಬ್ಬ ನಗರದ ಪಂಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಜೀವ ಬೆದರಿಕೆ (Life Threatening Case) ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಯಾದಗಿರಿ (Yadgir) ಪೊಲಿಸರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜು ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ.ಗಂಗಾ ನಗರದ ನಿವಾಸಿ ಅಭಿ ಎಂಬ ಯುವಕನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಇತ್ತೀಚೆಗೆ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆಡಿಯೋದಲ್ಲಿ ರಾಜು, ಬಾಸ್ ಬಗ್ಗೆ ಮಾತನಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನಿಂದ ಹತ್ಯೆ ಕೇಸ್;‌ ಸರ್ಕಾರದ ಎಸ್‌ಪಿಪಿಯಾಗಿ ಪ್ರಸನ್ನಕುಮಾರ್‌ ನೇಮಕಅಭಿ, ಬಾಸ್ ಬಾಸ್ ಎಂದು ಬಕೆಟ್ ಯಾಕೆ ಹಿಡಿತೀರಿ, ತಾಯಿ-ತಂದೆಗೆ ಬಕೆಟ್ ಹಿಡಿಯಿರಿ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ರಾಜು, ಅಭಿಗೆ ಕರೆ ಮಾಡಿ, ವೀಡಿಯೋ ಡಿಲೀಟ್ ಮಾಡದೇ ಇದ್ರೆ ಜೀವಂತ ಸುಡೋದಾಗಿ ಬೆದರಿಸಿದ್ದಾನೆ. ಜೊತೆಗೆ ಕೂಡಲೇ ಕ್ಷಮೆ ಕೇಳಿ ವೀಡಿಯೋ ಮಾಡಿ ಹಾಕುವಂತೆ ಧಮ್ಕಿ ಹಾಕಿದ್ದಾನೆ. ಈ ವೇಳೆ ದೂರವಾಣಿ ಕರೆಯನ್ನ ರೆಕಾರ್ಡ್ ಮಾಡಿದ್ದನ್ನ ಆಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾನೆ ಎಂದು ಹೇಳಲಾಗಿದೆ.ಇನ್ನೂ ರಾಜು ಧಮ್ಕಿ ಹಾಕಿದ್ದ ಎನ್ನಲಾದ ಆಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಕೂಡಲೇ ಮಾಹಿತಿ ಪಡೆದು ರಾಜುನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಜೀವ ಬೆದರಿಕೆಯಿಂದ ಅಭಿಯ ಪೋಷಕರು ಆತಂಕಕ್ಕೆ ಒಳಗಾಗಿದ್ದು, ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಬೆದರಿಕೆ ಸಂಬಂಧಿಸಿದಂತೆ ಇದುವರೆಗೂ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿ ಪವಿತ್ರಾ ಗೌಡ ಧಿಮಾಕು!Sign in to your account
Username or Email Address


Password

 Remember Me


