ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆ (Lok Sabha Election) ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ 81 ವರ್ಷದ ಯಡಿಯೂರಪ್ಪ (Yediyurappa) ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ. ಇದನ್ನೂ ಓದಿ: ರಾಹುಲ್‌ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ? ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೇ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ.ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೋಶಿ ಖಂಡಿಸಿದ್ದಾರೆ.  ಇದನ್ನೂ ಓದಿ: ದರ್ಶನ್ ಇರೋ ಠಾಣೆಗೆ ಶಾಮಿಯಾನ ಹಾಕಿದ್ದರ ಹಿಂದಿನ ಸೀಕ್ರೆಟ್ ರಿವೀಲ್ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? – ಇಲ್ಲಿದೆ ನೋಡಿ ಟೈಮ್‌ಲೈನ್‌.ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಪ್ರಹ್ಲಾದ್‌ ಜೋಶಿ ಎಚ್ಚರಿಸಿದ್ದಾರೆ.Sign in to your account
Username or Email Address


Password

 Remember Me


