ಬೆಂಗಳೂರು: ಗುರಿ ಸಾಧಿಸದೇ ಇದ್ದರೆ ವಾಣಿಜ್ಯ ಇಲಾಖೆ (Department Of Commerce) ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ.ವಿಧಾನಸೌಧದಲ್ಲಿ ವಾಣಿಜ್ಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಗುರಿ ಸಾಧನೆ ಬಗ್ಗೆ ಸೂಚನೆ ನೀಡಿದ್ದಾರೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕುವುದಿಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಬೇಕು. ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಆರ್.ಅಶೋಕ್‌ಗೆ ನನ್ನ ಮನೆ ಬಿಟ್ಟುಕೊಡ್ತೀನಿ: ಡಿಕೆಶಿ ಟಾಂಗ್ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. IGST ನಕಾರಾತ್ಮಕ ಸೆಟಲ್‍ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು. ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ. ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗದಿಪಡಿಸಲು ಸೂಚನೆ ನೀಡಿದ್ದಾರೆ.ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. Action plan ಸಿದ್ದಪಡಿಸಬೇಕು. ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು. ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಜುಲೈ 31 ಕಡೇ ದಿನ, ಮತ್ತೆ ಅವಧಿ ವಿಸ್ತರಣೆ ಮಾಡಲ್ಲ: ಡಿಕೆಶಿSign in to your account
Username or Email Address


Password

 Remember Me


