-ಮೋದಿ ಸಂಪುಟದಲ್ಲಿ 2ನೇ ಬಾರಿ ಮಂತ್ರಿ ಸ್ಥಾನಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪ್ರಲ್ಹಾದ್ ಜೋಶಿಯವರು‌ (Pralhad Joshi) ಮತ್ತೆ ಮೋದಿ ಸಂಪುಟದಲ್ಲಿ (Modi Cabinet 2024) ಪ್ರಮಾಣ ವಚನ ಸ್ವೀಕರಿಸಿದರು.ಜೋಶಿಯವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. 2004ರಿಂದಲೂ ಧಾರವಾಡ ಲೋಕಸಭೆ ಕ್ಷೇತ್ರವನ್ನು ನಿರಂತರವಾಗಿ ಪ್ರತಿನಿಧಿಸುತ್ತಲೇ ಬಂದಿರುವ ಅವರು ಪ್ರಸ್ತುತ 5ನೇ ಬಾರಿ ಸಂಸದರಾಗಿ ಚುನಾಯಿತರಾಗಿ ಐತಿಹಾಸಿಕ ದಾಖಲೆ ಬರೆದಿದ್ದಾರೆ.2019ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಪ್ರಲ್ಹಾದ್ ಜೋಶಿಯವರು ಪ್ರಧಾನಿ ಮೋದಿ ಸಂಪುಟದಲ್ಲಿ ಸಂಸದೀಯ ಮತ್ತು ಕಲ್ಲಿದ್ದಲು, ಗಣಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ಮೋದಿ ಅವರ ಮೂರನೇ ಅವಧಿಯ ಎನ್‍ಡಿಎ ಸರ್ಕಾರದಲ್ಲಿ ಕೇಂದ್ರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಈ ಬಗ್ಗೆ ಪ್ರತಿಕ್ರಿಯಿಸಿರುವ ಜೋಶಿಯವರು, ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿ ಕೇಂದ್ರ ಸಚಿವನಾಗುತ್ತಿರುವುದು ಬಹಳ ಹೆಮ್ಮೆ ಹಾಗೂ ಸಂತಸ ತಂದಿದೆ. ವಿಕಸಿತ ಭಾರತ ನಿರ್ಮಾಣದಲ್ಲಿ ಕೇಂದ್ರ ಸಚಿವನಾಗಿ ಸೇವೆ ಸಲ್ಲಿಸಲು ಮತ್ತೆ ಅವಕಾಶ ನೀಡಿದ ಪಕ್ಷಕ್ಕೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಪಕ್ಷದ ವರಿಷ್ಠರಿಗೆ, ಕಾರ್ಯಕರ್ತರಿಗೆ ಹಾಗೂ ಚುನಾಯಿಸಿದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.ಇದೇ ವೇಳೆ ರಾಜ್ಯ ಬಿಜೆಪಿ (BJP) ವರಿಷ್ಠ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಧಾರವಾಡ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮತ್ತಿತರರು ಜೋಶಿ ಅವರಿಗೆ ಶುಭ ಹಾರೈಸಿದ್ದಾರೆ.ಪ್ರಲ್ಹಾದ್ ಜೋಶಿಯವರು ಕೇಂದ್ರ ಸಚಿವರಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಧಾರವಾಡದಲ್ಲಿ ಅವರ ಕುಟುಂಬದವರು ಹಾಗೂ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಸಂಭ್ರಮಪಟ್ಟಿದ್ದಾರೆ.Sign in to your account
Username or Email Address


Password

 Remember Me


