ಬೆಂಗಳೂರು: ಲೋವರ್ ಆಗರಂನಿಂದ (Lower Agaram Road) ಸರ್ಜಾಪುರವರೆಗೂ (Sarjapura) ರಸ್ತೆ ಅಗಲೀಕರಣಕ್ಕೆ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ (BBMP) ನೀಡಿದ್ದು, ಇನ್ನೂ 10.77 ಎಕರೆ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.ನಗರದ ಎಎಸ್‌ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟಿನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರ ಜೊತೆ ಡಿಸಿಎಂ ಅವರು ಇಂದು (ಸೆ.28) ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು.ಇದನ್ನೂ ಓದಿ: ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಜಿ ರಸ್ತೆಯಿಂದ (M G Road) ಬೆಳ್ಳಂದೂರು ಭಾಗಕ್ಕೆ ತೆರಳಲು ಸುಮಾರು 1 ಗಂಟೆ ಸಮಯ ಬೇಕಾಗಿತ್ತು. ಈ ರಸ್ತೆ ನಿರ್ಮಾಣವಾದ ನಂತರ 5-8 ನಿಮಿಷಗಳ ಅಂತರದಲ್ಲಿ ಕ್ರಮಿಸಬಹುದು. ಬೆಳ್ಳಂದೂರು, ಈಜಿಪುರ, ಆಗರಂ ಭಾಗದ ಸಂಚಾರ ದಟ್ಟಣೆಗೆ ಮುಕ್ತಿ ಸಿಗಲಿದೆ. ನಾನು ಹಾಗೂ ಸಿಎಂ ಕೇಂದ್ರ ರಕ್ಷಣಾ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆವು ಎಂದರು.ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವಾಲಯ ಸ್ಪಂದಿಸಿ, ಒಟ್ಟು 22 ಎಕರೆ ಜಾಗವನ್ನು ರಸ್ತೆಗಾಗಿ ಬಿಟ್ಟುಕೊಡಲು ತೀರ್ಮಾನಿಸಿ ಸಹಕಾರ ನೀಡಿದೆ. ಈ ರಸ್ತೆ ನಿರ್ಮಾಣದ ಮೊದಲ ಹಂತದ 3.50 ಕಿ.ಮೀ ಕಾಮಗಾರಿಗೆ 35 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಟ್ರಿನಿಟಿ ಸರ್ಕಲ್, ಈಜಿಪುರ ಸೇರಿದಂತೆ ಒಂದಷ್ಟು ಕಡೆ ನೂತನ ರಸ್ತೆ ನಿರ್ಮಾಣಕ್ಕೆ ಇನ್ನೂ 10.77 ಎಕರೆ ಜಾಗವನ್ನು ರಕ್ಷಣಾ ಇಲಾಖೆ ನೀಡಬೇಕಿದೆ. ಇದರಿಂದ ಐಟಿ ಹಬ್‌ಗೆ ತೆರಳಲು ಇದ್ದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದೆ.ಐಟಿ ಹಬ್​ ಬೆಳ್ಳಂದೂರಿನಲ್ಲಿನ ಟ್ರಾಫಿಕ್​​ ಸಮಸ್ಯೆಯನ್ನು ನಿವಾರಿಸಲು ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಖರೀದಿಸುತ್ತಿದ್ದೇವೆ. ಜಮೀನು ಖರೀದಿ ಸಂಬಂಧ ಈಗಾಗಲೇ ರಕ್ಷಣಾ ಸಚಿವರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದೇನೆ. ಟ್ರಾಫಿಕ್… pic.twitter.com/KbUBw8TY7E— DK Shivakumar (@DKShivakumar) September 28, 2024ಈಗಾಗಲೇ ರಕ್ಷಣಾ ಇಲಾಖೆಯವರು 12.34 ಎಕರೆ ಜಾಗವನ್ನು ಬಿಬಿಎಂಪಿಗೆ ಹಸ್ತಾಂತರಿಸಿದ್ದಾರೆ. ಇದಕ್ಕಾಗಿ ನಮಗೆ ಸಹಕಾರ ಕೊಟ್ಟ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರು ಇದೇ 30 ರಂದು ನಿವೃತ್ತಿಯಾಗುತ್ತಿದ್ದು, ಅವರನ್ನು ನಮ್ಮ ಕಚೇರಿಗೆ ಆಹ್ವಾನಿಸಿ ಅಭಿನಂದಿಸಿದ್ದೇವೆ. ಬೆಂಗಳೂರಿನ ನಾಗರೀಕರಿಗೆ, ವಿಶೇಷವಾಗಿ ಐಟಿ ಹಬ್‌ಗೆ ತೆರಳುವವರಿಗೆ ಹಾಗೂ ಪೂರ್ವ ಬೆಂಗಳೂರಿಗರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.ನಾನು ಬೆಂಗಳೂರು ನಗರಭಿವೃದ್ಧಿ ಇಲಾಖೆಯ (Bengaluru Development Authority) ಜವಾಬ್ದಾರಿ ತೆಗೆದುಕೊಂಡ ನಂತರ ಬೆಳ್ಳಂದೂರು ಹಾಗೂ ಸುತ್ತಮುತ್ತಲ ಐಟಿ ಹಬ್ ಭಾಗದ ಜನರ ಸಮಸ್ಯೆ ಆಲಿಸಿದ್ದೆ. ಅಲ್ಲಿನ ಸಂಚಾರ ದಟ್ಟಣೆ ವಿಚಾರವಾಗಿ ದಿನನಿತ್ಯ 8-10 ಇ-ಮೇಲ್‌ಗಳು ನನಗೇ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ನಾನು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆವು. ಈ ಸಮಸ್ಯೆಗೆ ಈಗ ಪರಿಹಾರ ಸಿಕ್ಕಿದಂತಾಗಿದೆ ಎಂದು ಹೇಳಿದರು.ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆಹೆಬ್ಬಾಳದ ಬಳಿಯ ಹೋಪ್ ಡೈರಿ ಫಾರ್ಮ್ ಬಳಿ ಟನಲ್ ರಸ್ತೆಯ ಪ್ರವೇಶಕ್ಕೆ ಜಾಗ ಅಗತ್ಯವಿದೆ. ಇದಕ್ಕೆ 2 ಎಕರೆ ಜಾಗ ಬಿಟ್ಟುಕೊಡಬೇಕು ಎಂಬ ಪ್ರಸ್ತಾವನೆ ನೀಡಲಿದ್ದೇವೆ. ಈ ಜಾಗಗಳನ್ನು ರಕ್ಷಣಾ ಇಲಾಖೆಯಿಂದ ಪಡೆಯಲು ನಾನು ಬಹಳಷ್ಟು ಪ್ರಯತ್ನ ಮಾಡಿದ್ದೇನೆ. ಕಾಗದದ ಕೆಲಸ ಮಾಡಿದ್ದೇನೆ. ನಿರಂತರವಾಗಿ ರಕ್ಷಣಾ ಇಲಾಖೆ ಜೊತೆ ಸಂಪರ್ಕ ಇಟ್ಟುಕೊಂಡು ಮನವಿ ಮಾಡಿದ್ದೇನೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಕ್ಷಣಾ ಇಲಾಖೆ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಭೂಮಿ ಹಸ್ತಾಂತರಕ್ಕೆ ರಕ್ಷಣೆ ಇಲಾಖೆ ಏನು ಬೇಡಿಕೆ ಇಟ್ಟಿದೆ ಎಂದು ಕೇಳಿದಾಗ “ರಕ್ಷಣಾ ಇಲಾಖೆಯು ಭೂಮಿಗೆ ಪರ್ಯಾಯವಾಗಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವಂತೆ ಕೇಳಿದ್ದು, ನಾವು ಅದನ್ನು ಮಾಡುತ್ತೇವೆ” ಎಂದಿದ್ದಾರೆ.Sign in to your account
Username or Email Address


Password

 Remember Me


