ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ (B Nagendra) ರಾಜೀನಾಮೆ ನೀಡಿದ್ದಾರೆ.ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಸಿಬಿಐ (CBI) ಎಫ್‌ಐಆರ್‌ ದಾಖಲಿಸಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿತ್ತು.ಬುಧವಾರ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ರಾಜೀನಾಮೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದರು. Sign in to your account
Username or Email Address


Password

 Remember Me


