ಬೆಂಗಳೂರು: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ.ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ ಶ್ರೀನಿವಾಸ್ 11,700ಕ್ಕೂ ಅಧಿಕ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಗೆಲುವನ್ನು ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.ಮೈತ್ರಿ ಅಭ್ಯರ್ಥಿಗೂ ಗೆಲುವು: 
ಇನ್ನೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿಗೆ ಭರ್ಜರಿ ಗೆಲುವಾಗಿದೆ. 37,627 ಮತಗಳನ್ನು ಪಡೆದುಕೊಂಡಿರುವ ಸರ್ಜಿ 6,935 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವುಇನ್ನೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ 7,039 ಮತಗಳನ್ನ ಪಡೆದುಕೊಂಡರೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದನ್ನೂ ಓದಿ: ಜೂನ್ 4ರಂದು ಷೇರುಪೇಟೆ ಮಹಾಪತನ ದೇಶದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿಸಿಎಂ ಸಿದ್ದರಾಮಯ್ಯ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇತ್ತೀಚೆಗಷ್ಟೇ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಗುರುವಾರವೂ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದರು. ಇದೀಗ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಿದೆ.Sign in to your account
Username or Email Address


Password

 Remember Me


