ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು (Rahul Gandhi) ಮಾನನಷ್ಟ (Defamation Case) ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಶುಕ್ರವಾರ (ಜೂ.7) ರಂದು ನಗರದ ಸಿಟಿ ಸಿವಿಲ್ ಕೋರ್ಟ್‍ಗೆ ಆಗಮಿಸಲಿದ್ದಾರೆ. ಬೆಳಗ್ಗೆ 10:30ಕ್ಕೆ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು.ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೋರ್ಟ್ ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿಯವರು ಗೈರಾಗಿದ್ದರು.ವಿಚಾರಣೆಯ ಸಂದರ್ಭದಲ್ಲಿ ಗಾಂಧಿ ಪರ ವಕೀಲರು ಐ.ಎನ್.ಡಿ.ಐ.ಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿರುವುದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿಯನ್ನು ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆಯನ್ನು ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತ್ತು.2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಕಾಂಗ್ರೆಸ್ ಪಕ್ಷದ ಜಾಹೀರಾತುಗಳು ಮತ್ತು ಪ್ರಚಾರದ ಘೋಷಣೆಗಳನ್ನು ವಿರೋಧಿಸಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಕೇಶವ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.ಬಿಜೆಪಿಯು ಸಾರ್ವಜನಿಕ ಕಾಮಗಾರಿಗಳ ನಿರ್ವಹಣೆಗಾಗಿ ಗುತ್ತಿಗೆದಾರರು ಮತ್ತು ಇತರರಿಂದ 40% ಕಮಿಷನ್ ಮಾಡುತ್ತಿದೆ ಎಂದು ಜಾಹೀರಾತುಗಳಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತನ್ನ ಪಕ್ಷದ ಸದಸ್ಯರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತನ್ನು ಪ್ರಕಟಿಸಿದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಆರೋಪಿಸಿತ್ತು.ರಾಹುಲ್ ಗಾಂಧಿಯವರು ವಿಚಾರಣೆ ಬಳಿಕ 11:30ಕ್ಕೆ ಭಾರತ್ ಜೋಡೋ ಭವನದಲ್ಲಿ ಲೋಕಸಭಾ ಚುನಾವಣೆಯಲ್ಲಿ ವಿಜೇತ, ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉಪಸ್ಥಿತರಿರಲಿದ್ದಾರೆ.






 Advertisement 




Sign in to your account
Username or Email Address


Password

 Remember Me


