– ಹವಾಮಾನ ವೈಪರೀತ್ಯದಿಂದ ಐವರು ಕರ್ನಾಟಕದವರ ಸಾವು: ಸಿಎಂ ಸಂತಾಪಬೆಂಗಳೂರು: ಉತ್ತರಾಖಂಡದ (Uttarakhand) ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಮೃತಪಟ್ಟಿದ್ದು, ಇನ್ನೂ ಕೆಲವರು ಅಪಾಯದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸಚಿವ ಕೃಷ್ಣಬೈರೇಗೌಡರಿಗೆ (Krishna Byre Gowda) ಉಸ್ತುವಾರಿ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ (Siddaramaiah), ಉತ್ತರಾಖಂಡದ ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರು ಸೇರಿ 9 ಮಂದಿ ಸಾವುಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ… pic.twitter.com/IdfJpqKLpv— Siddaramaiah (@siddaramaiah) June 5, 2024ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದೇನು?Sign in to your account
Username or Email Address


Password

 Remember Me


