ಬೆಂಗಳೂರು: ಮಾಜಿ ಸಚಿವ, ಆನೇಕಲ್‌ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಕೇಶವಮೂರ್ತಿ(85) ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಶವಮೂರ್ತಿ (MP Keshavmurthy) ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಆನೇಕಲ್‌ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಇವರು ವೀರಪ್ಪಮೊಯ್ಲಿ ಅವರ ಸಂಪುಟದಲ್ಲಿ ಅರಣ್ಯ ಮತ್ತು ಸಣ್ಣ ನೀರಾವರಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.ಆನೇಕಲ್‌ ತಾಲ್ಲೂಕಿನ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೇಶವಮೂರ್ತಿ ಮಾಡಿದ್ದರು.Sign in to your account
Username or Email Address


Password

 Remember Me


