ಚಿಕ್ಕೋಡಿ(ಬೆಳಗಾವಿ): ಗಣೇಶ ವಿಸರ್ಜನೆ ಸಮಯದಲ್ಲಿ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬರಿಗೆ ಅಪರಿಚಿತನೋರ್ವ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ವಿಶಾಲ ವಿಷ್ಣು ಶಿವಡೆ ಎಂದು ಗುರುತಿಸಲಾಗಿದ್ದು, ಇವರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕುರ್ಲಿ ಗ್ರಾಮದ ನಿವಾಸಿ. ಡಿಜೆ ನೋಡುತ್ತಾ ನಿಂತಿದ್ದ ವಿಶಾಲ್‍ಗೆ ಅಪರಿಚಿತ ವ್ಯಕ್ತಿಯೊಬ್ಬ ಚಾಕು ಇರಿದು ಪರಾರಿಯಾಗಿದ್ದಾನೆ. ಘಟನೆಯಿಂದ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಯುವಕನನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಹಾಲ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಬಾರಪ್ಪ ಅಂದ್ರು: ಭಾಗ್ಯ ರೇಖಾ ಅಳಿಯ ಕಣ್ಣೀರುಗಣೇಶ್ ವಿಸರ್ಜನೆ ವೇಳೆ ಡಾಲ್ಬಿ ಡಿಜೆ ಬಳಕೆ ಮಾಡಲಾಗಿತ್ತು. ಡಾಲ್ಬಿ ಡಿಜೆ ನೋಡಲು ಸದಲಗಾ ಪಟ್ಟಣಕ್ಕೆ ವಿಶಾಲ್ ಆಗಮಿಸಿದ್ದರು. ಈ ವೇಳೆ ಘಟನೆ ನಡೆದಿದೆ. ಡಿಜೆ ಬಳಸದಂತೆ ಸರ್ಕಾರದ ಆದೇಶವಿದ್ದರೂ ಸದಲಗಾ ಪಟ್ಟಣದಲ್ಲಿ ಡಿಜೆ ಬಳಕೆ ಮಾಡಲು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅರಣ್ಯಕ್ಕೆ ಬಿಟ್ಟು ಬಂದರೂ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ ಬಂದ ಕೋತಿಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.Sign in to your account
Username or Email Address


Password

 Remember Me


