ಶಿವಮೊಗ್ಗ: ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಭದ್ರಾವತಿ ಕ್ಷೇತ್ರದಿಂದ ಶಾರದ ಅಪ್ಪಾಜಿಗೌಡ ಅವರು ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.ಜಿಲ್ಲೆಯ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ಮಾಜಿ ಶಾಸಕ ದಿವಗಂತ ಅಪ್ಪಾಜಿಗೌಡರ ಪ್ರತಿಮೆ ಅನಾವರಗೊಳಿಸಿ ಮಾತನಾಡಿದ ಅವರು, ಭದ್ರಾವತಿ ಕ್ಷೇತ್ರದ ಜನರು ಹಾಗೂ ಅಪ್ಪಾಜಿಗೌಡ ಅವರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹೀಗಾಗಿ ಕ್ಷೇತ್ರದ ಜನರು, ಕಾರ್ಯಕರ್ತರ ಅಪೇಕ್ಷೆಯಂತೆ ಶಾರದ ಅಪ್ಪಾಜಿಗೌಡರನ್ನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತೇವೆ ಎಂದರು. ಇದನ್ನೂ ಓದಿ: ನಿನ್ನೆಯಷ್ಟೇ ಅಮೆರಿಕದಿಂದ ಬೆಂಗಳೂರಿಗೆ ಲ್ಯಾಂಡ್ – ಇಂದು ಬೆಂಕಿಗೆ ಬಲಿಇದೇ ತಿಂಗಳ 27ರಂದು ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಾಗಾರ ನಡೆಸಲು ನಿರ್ಧರಿಸಲಾಗಿದೆ. ಮೊದಲ ಹಂತದ 140 ಅಭ್ಯರ್ಥಿಗಳ ಕಾರ್ಯಗಾರ ನಡೆಯಲಿದ್ದು, ಅಂದೇ ಮೊದಲ ಹಂತವಾಗಿ ಮುಂಬರುವ ವಿಧಾನಸಭಾ ಕ್ಷೇತ್ರದ 140 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಲ್ಲಿ ಎಲ್ಲ ವಿಚಾರವನ್ನು ಚರ್ಚೆ ಮಾಡುತ್ತೇವೆ ಎಂದರು.Sign in to your account
Username or Email Address


Password

 Remember Me


