ಬೆಂಗಳೂರು: ರಾಜ್ಯದಲ್ಲಿ ಇಂದು 818 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 21 ಮಂದಿ ಸಾವನ್ನಪ್ಪಿದ್ದು, 1,414 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 7 ಜಿಲ್ಲೆಗಳಲ್ಲಿ ಇಂದು ಶೂನ್ಯ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲಿ ಒಟ್ಟು 13,741 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,69,361 ಜನರಿಗೆ ಕೊರೊನಾ ಸೋಂಕು ತಗುಲಿದೆ. 29,17,944 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.80ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.2.56ರಷ್ಟಿದೆ. ಇದನ್ನೂ ಓದಿ: ಈ ಲಕ್ಷಣಗಳು ಕಂಡು ಬಂದರೆ ನಿಮಗೆ ಮರೆವಿನ ಕಾಯಿಲೆ ಇದೆ ಎಂದರ್ಥಇಂದು ರಾಜ್ಯದಲ್ಲಿ ಒಟ್ಟು 2,62,709 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,01,549 ಸ್ಯಾಂಪಲ್ (ಆರ್‍ಟಿ ಪಿಸಿಆರ್ 69,117 + 32,432 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 359 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 8 ಜನ ಮರಣ ಹೊಂದಿದ್ದಾರೆ. 381 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 359, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಚಿತ್ರದುರ್ಗ 7, ದಕ್ಷಿಣ ಕನ್ನಡ 114, ದಾವಣಗೆರೆ 8, ಧಾರವಾಡ 6, ಗದಗ 1, ಹಾಸನ 23, ಕಲಬುರಗಿ 4, ಕೊಡಗು 25, ಕೋಲಾರ 10, ಮಂಡ್ಯ 13, ಮೈಸೂರು 71, ಶಿವಮೊಗ್ಗ 17, ತುಮಕೂರು 24, ಉಡುಪಿ 73, ಉತ್ತರ ಕನ್ನಡ 22 ಹಾಗೂ ವಿಜಯಪುರದಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


