ಆನೇಕಲ್: ಮೈಸೂರು – ಪುದುಕೋಟೈ ಪ್ಯಾಸೆಂಜರ್ ಎಕ್ಸ್ ಪ್ರೆಸ್ ರೈಲು ಆನೇಕಲ್ ತಾಲೂಕಿನ ಆವಲಹಳ್ಳಿ ಬಳಿ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ.ರೈಲಿನಲ್ಲಿ ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ರಾತ್ರಿ 9 ಗಂಟೆ ಸುಮಾರಿಗೆ ಲಾರಿ ಚಾಲಕ ಗೂಗಲ್ ಮ್ಯಾಪ್ ನಂಬಿ ಲಾರಿ ಚಲಾಯಿಸಿಕೊಂಡು ಬಂದಿದ್ದಾನೆ. ಆದರೆ 2 ವರ್ಷಗಳ ಹಿಂದೆಯೇ ಆ ರಸ್ತೆ ಬಂದ್ ಆಗಿದ್ದು, ಪಕ್ಕದಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ನೇಣುಬಿಗಿದ ಸ್ಥಿತಿಯಲ್ಲಿ ಪ್ರಯಾಗರಾಜ್ ಸಂತ ನರೇಂದ್ರಗಿರಿ ಪತ್ತೆಸಣ್ಣ ಮಳೆಯಾದರೂ ಈ ಅಂಡರ್‍ಪಾಸ್‍ನಲ್ಲಿ ನೀರು ತುಂಬಿಕೊಳ್ಳುತ್ತದೆ. ಅವೈಜ್ಞಾನಿಕವಾಗಿ ಅಂಡರ್ ಪಾಸ್ ನಿರ್ಮಾಣವಾಗಿತ್ತು. ಇದೀಗ ಆ ಅಂಡರ್ ಪಾಸ್ ದುರಸ್ತಿ ಕಾರ್ಯ ಮಂದಗತಿಯಲ್ಲಿ ನಡೆಯುತ್ತಿದೆ. ಲಾರಿ ಚಾಲಕ ಹಳಿ ದಾಟುವ ಹೊತ್ತಿಗೆ ರೈಲು ಬಂದಿದೆ. ತಕ್ಷಣವೇ ಲಾರಿ ಚಾಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ. ಆದರೆ ಲಾರಿ ಎಂಜಿನ್ ಅನ್ನು ರೈಲು ಸುಮಾರು ಅರ್ಧ ಕಿ.ಮೀ.ವರೆಗೆ ಎಳೆದೊಯ್ದಿದೆ.ಮುರ್ನಾಲ್ಕು ಗಂಟೆಗಳ ಕಾಲ ಲಾರಿ ಎಂಜಿನ್ ಅನ್ನು ಹಳಿ ಮೇಲಿಂದ ಎತ್ತಲು ಹರಸಾಹಸ ಪಡಲಾಯಿತು. ಇದರಿಂದ ಕೇರಳ, ತಮಿಳುನಾಡಿನ 2 ರೈಲುಗಳನ್ನ ತಡೆಯಲಾಗಿತ್ತು. ಈ ಎಡವಟ್ಟಿಗೆ ರೈಲ್ವೆ ಇಲಾಖೆಯೇ ಕಾರಣವೆಂದು ಪ್ರಯಾಣಿಕರು ದೂರಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ಮುಂದಾದ ಸರ್ಕಾರ – ಮಸೂದೆಯಲ್ಲಿ ಏನಿದೆ?Sign in to your account
Username or Email Address


Password

 Remember Me


