ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಇದನ್ನೂ ಓದಿ: ಮಗು ಪ್ರವೇಶಿಸಿ ಅಪವಿತ್ರವಾಯ್ತೆಂದು ಪೋಷಕರಿಗೆ ದೇಗುಲ ಶುದ್ಧೀಕರಣದ ಜೊತೆಗೆ 10 ಸಾವಿರ ದಂಡ!ಈ ಕುರಿತಂತೆ ಮುರುಗೇಶ್ ಆರ್ ನಿರಾಣಿ ಅವರು, ನನ್ನ ಟ್ವಿಟ್ಟರ್ ಖಾತೆ @NiraniMurugesh ಯನ್ನು ಕೆಲವರು ಇಂದು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಲಾಗಿದೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್ಹ್ಯಾಕರ್‌ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದೆಂದು ಮನವಿ. ನಾವು ಟ್ವಿಟರ್‌ಗೆಗೆ ದೂರು ನೀಡಿದ್ದೇವೆ. ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಹಿಂದೆಯು ಇದೇ ರೀತಿ ಕೆಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು ಎಂದು ತಿಳಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


