ಹುಬ್ಬಳ್ಳಿ: ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ.ಮೆಹಬೂಬ್ ಸಾಬ್ ಸೂಡಿ ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ. ಮೆಹಬೂಬ್ ಸಾಬ್ ಅವರು ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದರು. ಆದರೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯ ಕಿರುಕುಳಕ್ಕೆ ಬೇಸತ್ತ ಮೆಹಬೂಬ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ನಗರಸಭೆಗೆ ಚುನಾವಣೆ ನಡೆದು ನಾಲ್ಕು ತಿಂಗಳಾದರೂ ಅಧಿಕಾರವಿಲ್ಲ..!ಒಂದೇ ವಾರದಲ್ಲಿ ಈ ರೀತಿ ಎರಡು ಆತ್ಮಹತ್ಯೆ ಯತ್ನ ಪ್ರಕರಣಗಳು ಬೆಳಕಿಗೆ ಬಂದಿದೆ. ಧಾರವಾಡ ಡಿಹೆಚ್‍ಓ ಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲವೆಂದು ಹೆಲ್ತ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೂ ಓದಿ:  ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ






 Advertisement 




Sign in to your account
Username or Email Address


Password

 Remember Me


