ದಾವಣಗೆರೆ: ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ಕಾನೂನು ತರಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ದೇವಸ್ಥಾನ ತೆರವು ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಉಪಚುನಾವಣೆ, ವಿಧಾನಪರಿಷತ್ ಚುನಾವಣೆ, ದೇವಸ್ಥಾನ ತೆರವು ಮಾಡಿರುವ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ಕಾನೂನುಗಳನ್ನು ತರಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ. ಇದನ್ನೂ ಓದಿ:  ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿಬಿಹಾರ ರಾಜ್ಯದಲ್ಲಿ ಕೆಲವು ಕಾನೂನು ಬದಲಾವಣೆ ಮಾಡಿದ್ದಾರೆ. ಅದೇ ರೀತಿ ಇಲ್ಲಿಯೂ ಕೂಡ ಕೆಲವೊಂದು ಕಾನೂನು ಬದಲಾವಣೆ ಮಾಡಿ, ಪೂಜಾ ಸ್ಥಳಗಳನ್ನು ಸ್ಥಳಾಂತರ ಮಾಡಲು ಕಂದಾಯ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:  ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಕುರಿತು ಮಾತನಾಡಿದ ಅವರು, ಬಿಎಸ್‍ವೈ ಹೇಳಿಕೆ ಬಗ್ಗೆ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಹುಷಾರಾಗಿರಿ ಎಂದಿದ್ದಾರೆ. ಅದು ಹೊರತು ಬೇರೆ ಇಲ್ಲ. ಇನ್ನೊಂದು ತಿಂಗಳೊಳಗೆ ಬಿಜೆಪಿಗೆ ಹಲವರು ಸೇರುತ್ತಾರೆ. ಬಹಳಷ್ಟು ಮುಖಂಡರನ್ನು ಸೇರಿಸಿಕೊಳ್ಳಲು ಕೇಂದ್ರದಿಂದ ಅನುಮತಿ ಕೇಳಿದ್ದೇವೆ. ಬಿಜೆಪಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸೇರುತ್ತಾರೆ. ಕೇಂದ್ರಕ್ಕೆ ಪಟ್ಟಿ ನೀಡಿ ಒಂದು ತಿಂಗಳು ಕಳೆದಿದೆ. ಅನುಮತಿಗಾಗಿ ನಾವು ಕಾಯುತ್ತಿದ್ದೇವೆ. ಕೆಲವೇ ದಿನಗಳಲ್ಲಿ ಹಲವರು ಬಿಜೆಪಿಗೆ ಸೇರ್ಪಡೆ ಮಾಡ್ತಾರೆ ಎಂದು ತಿಳಿಸಿದ್ದಾರೆ.Sign in to your account
Username or Email Address


Password

 Remember Me


