ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಜೊತೆ ಮತ್ತೊಂದು ಹೊಸ ಸಿನಿಮಾಕ್ಕಾಗಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೈ ಜೋಡಿಸಲಿದ್ದಾರೆ.2017ರಲ್ಲಿ ತೆರೆಕಂಡ ಪುನೀತ್ ಅಭಿನಯದ ರಾಜಕುಮಾರ ಸಿನಿಮಾಕ್ಕೆ ಸಂತೋಷ್ ಆನಂದ್ ರಾಮ್ ಆ್ಯಕ್ಷನ್ ಕಟ್ ಹೇಳಿದ್ದರು. ಈ ಸಿನಿಮಾ ಸ್ಯಾಂಡಲ್‍ವುಡ್ ಬಾಕ್ಸ್ ಆಫೀಸ್‍ನಲ್ಲಿ ಸಾಕಷ್ಟು ಸದ್ದು ಮಾಡುವುದರ ಜೊತೆಗೆ ಫ್ಯಾಮಿಲಿ ಪ್ರೇಕ್ಷಕರ ಮನ ಗೆದ್ದಿತ್ತು. ನಂತರ ಯುವರತ್ನ ಸಿನಿಮಾದ ಮೂಲಕ ಸಂತೋಷ್ ಆನಂದ್ ರಾಮ್ ಪುನೀತ್‍ಗೆ ಮತ್ತೊಮ್ಮೆ ಆ್ಯಕ್ಷನ್ ಕಟ್ ಹೇಳಿದ್ದರು. ವಿಶೇಷವೆಂದರೆ ಈ ಎರಡು ಸಿನಿಮಾಗಳು ಹೊಂಬಾಳೆ ಫಿಲ್ಮ್ ಬ್ಯಾನರ್ ಅಡಿ ನಿರ್ಮಾಣವಾಗಿತ್ತು.ಇದೀಗ  ಸಂತೋಷ್ ಆನಂದ್ ರಾಮ್, ಪುನೀತ್ ಮತ್ತು ಹೊಂಬಾಳೆ ಫಿಲ್ಮ್ ಕಾಂಬಿನೇಷನ್‍ನಲ್ಲಿ ಮತ್ತೊಂದು ಹೊಸ ಸಿನಿಮಾ ಸೆಟ್ಟೇರುತ್ತಿರುವ ಬಗ್ಗೆ ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ: ನಿವೃತ್ತ ಹವಾಲ್ದಾರ್ ಪುತ್ರನ ಆತ್ಮಹತ್ಯೆ ಪ್ರಕರಣ- ಸೈಕೋ ರೀತಿ ವರ್ತಿಸುತ್ತಿದ್ದ ವಿದ್ಯಾರ್ಥಿಈ ಕುರಿತಂತೆ ಸಂತೋಷ್ ಆನಂದ್ ರಾಮ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪುನೀತ್ ಜೊತೆಗಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ಪುನೀತ್ ಹಾಗೂ ನನ್ನ ಕಾಂಬಿನೇಷನ್‍ನ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳು ಮತ್ತು ಪ್ರೇಕ್ಷಕರು ಯಾವಾಗಲೂ ಕೇಳುತ್ತಿದ್ದರು. ಮುಂದಿನ ವರ್ಷ ನಮ್ಮ ಕಾಂಬಿನೇಷನ್‍ನಲ್ಲಿ ಹೊಸ ಸಿನಿಮಾ ಸೆಟ್ಟೇರಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕೊನೆಯಲ್ಲಿ, ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದ. ನಿಮ್ಮ ಅಭಿಮಾನ ನಮಗೆ ಶ್ರೀ ರಕ್ಷೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.To All the Fans & Audience who are continuously asking About my film with Power star @PuneethRajkumar sir in association with @hombalefilms will start by Early Next year????Thanks for the love❤️ “ನಿಮ್ಮ ಅಭಿಮಾನ ನಮಗೆ ಶ್ರೀರಕ್ಷೆ” pic.twitter.com/8J1ic0SgdT— Santhosh Ananddram (@SanthoshAnand15) September 18, 2021ಒಟ್ಟಾರೆ ರಾಜಕುಮಾರ ಹಾಗೂ ಯುವರತ್ನ ಸಿನಿಮಾದ ಮೂಲಕ ಸಕ್ಸಸ್ ಕಂಡಿದ್ದ ಈ ತಂಡ ಇದೀಗ ಮತ್ತೊಮ್ಮೆ ಒಂದಾಗಿ ಪ್ರೇಕ್ಷಕರನ್ನು ಹೇಗೆ ಮೋಡಿ ಮಾಡಲಿದ್ದಾರೆ ಎಂದು ಕಾದು ನೋಡಬೇಕಾಗಿದೆ. ಇದನ್ನೂ ಓದಿ: ಯುಪಿ ಸಿಎಂ ಆಗಬೇಕಾ, ಬೇಡ್ವಾ ಅಂತ ಪ್ರಿಯಾಂಕಾ ಗಾಂಧಿ ನಿರ್ಧರಿಸ್ತಾರೆ: ಸಲ್ಮಾನ್ ಖುರ್ಷಿದ್ 






 Advertisement 




Sign in to your account
Username or Email Address


Password

 Remember Me


