ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ, ದಿನೇ ಹೆಚ್ಚಾಗುತ್ತಿದ್ದು, ಸಿಂಧನೂರು ನಗರದ ಮಹಿಬೂಬಿಯಾ ಕಾಲೋನಿಯಲ್ಲಿ 6 ವರ್ಷದ ಮಗು ಡೆಂಗ್ಯೂಗೆ ಬಲಿಯಾಗಿದ್ದಾಳೆ.ಅಂಗನವಾಡಿ ಕಾರ್ಯಕರ್ತೆ ಅನಿತಾರವರ ಮಗಳು ಸೋನು(6) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಇಬ್ಬರು ಮಕ್ಕಳು ಅಸುನೀಗಿದ್ದಾರೆ. ಒಂದು ವಾರದಿಂದ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋನುಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ:  ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?ಕಳೆದ ವಾರವಷ್ಟೇ ಮಾನ್ವಿಯಲ್ಲಿ 5 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾಗಿದ್ದ. ಡೆಂಗ್ಯೂಗೆ ಜಿಲ್ಲೆಯಲ್ಲಿ ಇದುವರೆಗೂ 5 ಮಕ್ಕಳು ಬಲಿಯಾಗಿದ್ದಾರೆ ಅಂತ ಶಂಕಿಸಲಾಗಿದೆ. ಆದರೆ ಎರಡು ಪ್ರಕರಣಗಳು ಮಾತ್ರ ಧೃಡಪಟ್ಟಿವೆ. ಇಡೀ ಜಿಲ್ಲೆಯಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಡೆಂಗ್ಯೂ ಪ್ರಕರಣಗಳೂ ಸಹ ವಿಪರೀತವಾಗಿವೆ. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರರಿಮ್ಸ್ ಆಸ್ಪತ್ರೆಯೊಂದರಲ್ಲೇ 30ಕ್ಕೂ ಅಧಿಕ ಮಕ್ಕಳಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1,500ಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದಾರೆ. ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳಿಂದ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.






 Advertisement 




Sign in to your account
Username or Email Address


Password

 Remember Me


