ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರು ವಿಕಲಚೇನತರಿಗೆ ಸರ್ಕಾರದಿಂದ ನೀಡಲಾದ ತ್ರಿಚಕ್ರ ಮೋಟಾರು ಸೈಕಲ್ ವಾಹನಗಳನ್ನು ಹುಬ್ಬಳ್ಳಿ ಸಕ್ರ್ಯೂಟ್ ಹೌಸ್ ಆವರಣದಲ್ಲಿಂದು ವಿತರಣೆ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕಲಚೇತನರು ಪ್ರತಿನಿತ್ಯ ಓಡಾಡಲು ಕಷ್ಟಪಡುವುದನ್ನು ನೋಡಿದ್ದೇವೆ. ಸರ್ಕಾರದಿಂದ ನೀಡಿರುವ ತ್ರಿಚಕ್ರ ವಾಹನದಿಂದ ವಿಕಲಚೇನರಿಗೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಾಯಕಾರಿಯಾಗಲಿದೆ ಎಂದರು.
 Advertisement 



ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 2008-09 ರಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು ಹಾಗೂ ನಿಯಮಗಳ ಅನುಸಾರ, ಯಾವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂಬುದನ್ನು ಅವಲೋಕಿಸಿ ಕ್ರಮ ಕೈಗೊಳ್ಳಬೇಕಿದೆ. ಇದು ಬಹಳ ಸೂಕ್ಷ್ಮವಾದ ವಿಚಾರ. ನೂರಾರು ವರ್ಷಗಳ ಹಳೆಯದಾದ ದೇವಸ್ಥಾನ ಅಥವಾ ಇತರೆ ಧಾರ್ಮಿಕ ಸ್ಥಳ ತೆರವುಗೊಳಿಸುವ ವೇಳೆಯಲ್ಲಿ ಭಕ್ತ ಅಭಿಪ್ರಾಯ ಸಂಗ್ರಹಿಸುವುದು ಮುಖ್ಯವಾಗಿದೆ. ಒಂದು ವೇಳೆ ಸ್ಥಳಾಂತರಕ್ಕೆ ಅವಕಾಶವಿದ್ದರೆ ಅದನ್ನು ಪರಿಗಣಿಸಬೇಕು. ತರಾತುರಿಯಲ್ಲಿ ದೇವಸ್ಥಾನ ತೆರವು ಸಲ್ಲದು ಎಂದು ತಿಳಿಸಿದರು.  ಇದನ್ನೂ ಓದಿ: ದೇವಸ್ಥಾನ ಕೆಡವಿ ಹಿಂದೂ ಧರ್ಮಕ್ಕೆ ದ್ರೋಹ: ದಿಂಗಾಲೇಶ್ವರ ಶ್ರೀ
 Advertisement 




 Advertisement 



ಬಿ.ಆರ್.ಟಿ.ಎಸ್ ವೇಳೆಯಲ್ಲಿ ಭೂಸ್ವಾಧೀನ ಪಡೆದು ಪರಿಹಾರವನ್ನು ನೀಡಲಾಗಿದೆ. ಆದಾಗ್ಯೂ ಕೆಲವು ಕಟ್ಟಡಗಳ ತೆರವು ಕೈಗೊಂಡಿಲ್ಲ. ಈ ಕುರಿತು ಹಲವು ಸಭೆಗಳಲ್ಲಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.  ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಪಸ್ವರ ತೆಗೆದಿದೆ. ಕೇಂದ್ರ ಸರ್ಕಾರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿಗಾಗಿ ಕಾಯುತ್ತಿದ್ದೇವೆ. ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಯಡಿಯ್ಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ವೇಳೆಯಲ್ಲಿ 500 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದ್ದಾರೆ ಎಂದು ಹೇಳಿದರು.
  
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಮಲ್ಲಿಕಾರ್ಜುನ ಗುಡೂರು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಡಿ.ಎನ್. ಮೂಲಿಮನಿ, ಮುಖಂಡರಾದ ಮಲ್ಲಿಕಾರ್ಜುನ ಸವಕಾರ, ಸಿದ್ದು ಮೂಗಲಿ ಶೆಟ್ಟರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
  






 Advertisement 




ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕಲಚೇತನರು ಪ್ರತಿನಿತ್ಯ ಓಡಾಡಲು ಕಷ್ಟಪಡುವುದನ್ನು ನೋಡಿದ್ದೇವೆ. ಸರ್ಕಾರದಿಂದ ನೀಡಿರುವ ತ್ರಿಚಕ್ರ ವಾಹನದಿಂದ ವಿಕಲಚೇನರಿಗೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಾಯಕಾರಿಯಾಗಲಿದೆ ಎಂದರು.ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 2008-09 ರಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು ಹಾಗೂ ನಿಯಮಗಳ ಅನುಸಾರ, ಯಾವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂಬುದನ್ನು ಅವಲೋಕಿಸಿ ಕ್ರಮ ಕೈಗೊಳ್ಳಬೇಕಿದೆ. ಇದು ಬಹಳ ಸೂಕ್ಷ್ಮವಾದ ವಿಚಾರ. ನೂರಾರು ವರ್ಷಗಳ ಹಳೆಯದಾದ ದೇವಸ್ಥಾನ ಅಥವಾ ಇತರೆ ಧಾರ್ಮಿಕ ಸ್ಥಳ ತೆರವುಗೊಳಿಸುವ ವೇಳೆಯಲ್ಲಿ ಭಕ್ತ ಅಭಿಪ್ರಾಯ ಸಂಗ್ರಹಿಸುವುದು ಮುಖ್ಯವಾಗಿದೆ. ಒಂದು ವೇಳೆ ಸ್ಥಳಾಂತರಕ್ಕೆ ಅವಕಾಶವಿದ್ದರೆ ಅದನ್ನು ಪರಿಗಣಿಸಬೇಕು. ತರಾತುರಿಯಲ್ಲಿ ದೇವಸ್ಥಾನ ತೆರವು ಸಲ್ಲದು ಎಂದು ತಿಳಿಸಿದರು.  ಇದನ್ನೂ ಓದಿ: ದೇವಸ್ಥಾನ ಕೆಡವಿ ಹಿಂದೂ ಧರ್ಮಕ್ಕೆ ದ್ರೋಹ: ದಿಂಗಾಲೇಶ್ವರ ಶ್ರೀಬಿ.ಆರ್.ಟಿ.ಎಸ್ ವೇಳೆಯಲ್ಲಿ ಭೂಸ್ವಾಧೀನ ಪಡೆದು ಪರಿಹಾರವನ್ನು ನೀಡಲಾಗಿದೆ. ಆದಾಗ್ಯೂ ಕೆಲವು ಕಟ್ಟಡಗಳ ತೆರವು ಕೈಗೊಂಡಿಲ್ಲ. ಈ ಕುರಿತು ಹಲವು ಸಭೆಗಳಲ್ಲಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.  ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಪಸ್ವರ ತೆಗೆದಿದೆ. ಕೇಂದ್ರ ಸರ್ಕಾರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿಗಾಗಿ ಕಾಯುತ್ತಿದ್ದೇವೆ. ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಯಡಿಯ್ಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ವೇಳೆಯಲ್ಲಿ 500 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದ್ದಾರೆ ಎಂದು ಹೇಳಿದರು.  ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಮಲ್ಲಿಕಾರ್ಜುನ ಗುಡೂರು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಡಿ.ಎನ್. ಮೂಲಿಮನಿ, ಮುಖಂಡರಾದ ಮಲ್ಲಿಕಾರ್ಜುನ ಸವಕಾರ, ಸಿದ್ದು ಮೂಗಲಿ ಶೆಟ್ಟರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  Sign in to your account
Username or Email Address


Password

 Remember Me


