ಚಿಕ್ಕಬಳ್ಳಾಪುರ: ಮಧ್ಯರಾತ್ರಿ ಎಟಿಎಂಗೆ ಎಂಟ್ರಿ ಕೊಟ್ಟ ಇಬ್ಬರು ಕಳ್ಳರು ಎಟಿಎಂ ಯಂತ್ರ ಒಡೆದು ಹಾಕಿ ಸರಿ ಸುಮಾರು 15 ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೇರೇಸಂದ್ರ ಕ್ರಾಸ್‍ನಲ್ಲಿ ನಡೆದಿದೆ.  ಇದನ್ನೂ ಓದಿ: ಹಾಸನದಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ – ಮಷಿನ್‍ ಸಂಪೂರ್ಣ ಜಖಂಗ್ರಾಮದ ಎಸ್‍ಬಿಎಂ ಎಟಿಎಂ ಸೆಂಟರ್ ನಲ್ಲಿ ಘಟನೆ ನಡೆದಿದ್ದು, ಮುಸುಕುಧಾರಿಗಳಾಗಿ ಬಂದ ದರೋಡೆಕೋರರು ಮೊದಲು ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದು ಹಾಕಿ ಕೃತ್ಯ ನಡೆಸಿದ್ದಾರೆ. ಬೆಳಿಗ್ಗೆ ಹಣ ಡ್ರಾ ಮಾಡಲು ಬಂದ ಗ್ರಾಹಕರು ಬ್ಯಾಂಕ್ ಮ್ಯಾನೇಜರ್ ಗೆ ವಿಷಯ ತಿಳಿಸಿದ್ದು, ಬ್ಯಾಂಕ್ ಮ್ಯಾನೇಜರ್ ಪೇರೇಸಂದ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಟಿಎಂ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೇರೇಸಂದ್ರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  ಇದನ್ನೂ ಓದಿ: ಸಿಸಿಟಿವಿ ಧ್ವಂಸಗೊಳಿಸಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನಇತ್ತೀಚೆಗಷ್ಟೇ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದಲ್ಲಿ ಎಸ್‌ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ಮಾಡಿ ಹಣ ಸಿಗದೇ ದರೋಡೆಕೋರ ಬರಿಗೈಯಲ್ಲಿ ತೆರಳಿದ್ದನು. ಇನ್ನೂ ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳ್ಳತನ ಮಾಡಲು ಬಂದಿದ್ದ ಕಳ್ಳ ಸಿಸಿಟಿವಿ ಗಮನಿಸಿದ ಬಳಿಕ ಎಚ್ಚರಗೊಂಡು ಸಿಸಿಟಿವಿಯನ್ನು ಧ್ವಂಸ ಮಾಡಿ ಅಲ್ಲಿಂದ ಪರಾರಿಯಾಗಿದ್ದನು.






 Advertisement 




Sign in to your account
Username or Email Address


Password

 Remember Me


