ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉದನೆ ತೂಗು ಸೇತುವೆ ಮೇಲೆ ಪುರುಷರ ಒಂದು ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು, ಯಾರೋ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.ಇಂದು ಬೆಳಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್‍ನಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು, ಅದರಲ್ಲಿ ಆಂಧ್ರ ಪ್ರದೇಶದ ಪುಟ್ಟಪರ್ತಿಯ ಸುಬ್ರಹ್ಮಣ್ಯಂ ಎಂಬವರ ಮಗ ರಮಣ ಎಂದಿದೆ. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದ ಡೆತ್‍ ನೋಟ್ ಸಹ ಪತ್ತೆಯಾಗಿದೆ. ಇದನ್ನೂ ಓದಿ: ಜೋಡೆತ್ತುಗಳ ಮೇಲೆ ತಡರಾತ್ರಿ ಮಾರಣಾಂತಿಕ ಹಲ್ಲೆ: ದುಷ್ಕರ್ಮಿಗಳಿಗಾಗಿ ಪೊಲೀಸರ ಶೋಧಅಲ್ಲದೆ ಸೆ.15ರಂದು ಧರ್ಮಸ್ಥಳದಿಂದ ಉದನೆಗೆ ಬಸ್ಸಿನಲ್ಲಿ ಪ್ರಯಾಣಿಸಿರುವ ಬಸ್ ಟಿಕೆಟ್ ಸಹ ಪತ್ತೆಯಾಗಿದೆ. ನೆಲ್ಯಾಡಿ ಹೊರಠಾಣೆ ಎಎಸ್‍ಐ ಸೀತಾರಾಮ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ, ಬ್ಯಾಗ್ ಪರಿಶೀಲನೆ ನಡೆಸಿ, ವಶಕ್ಕೆ ಪಡೆದುಕೊಂಡಿದ್ದಾರೆ.Sign in to your account
Username or Email Address


Password

 Remember Me


