ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Valmiki Develoment Corporation) ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಲು ಎಸ್‌ಐಟಿ (SIT) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಕರಣದ ಸಮಗ್ರ ತನಿಖೆ ನಡೆಸಲು ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಸರ್ಕಾರ ರಚಿಸಿದೆ. ಇದನ್ನೂ ಓದಿ: ಎಸ್‌ಟಿ ನಿಗಮ ಹಗರಣ – ವಾಲ್ಮೀಕಿ ನಿಗಮ ಎಂಡಿ, ಲೆಕ್ಕಾಧಿಕಾರಿ ಬಂಧನನಾಲ್ಕು ಸದಸ್ಯರ ತಂಡ
ಎಸ್‌ಐಟಿಗೆ ಮುಖ್ಯಸ್ಥರಾಗಿ ಮನೀಶ್‌ ಖರ್ಬೀಕರ್‌ರನ್ನು ನೇಮಿಸಲಾಗಿದೆ. ಬೆಂಗಳೂರು ನಗರ ಉಪ ಪೊಲೀಸ್‌ ಆಯುಕ್ತ ಶಿವಪ್ರಕಾಶ್‌ ದೇವರಾಜು, ರಾಜ್ಯ ಗುಪ್ತ ವಾರ್ತೆ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್‌, ಸಿಐಡಿ ಪೊಲೀಸ್‌ ಅಧೀಕ್ಷಕ ರಾಘವೇಂದ್ರ ಕೆ. ಹೆಗಡೆ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.ಶಿವಮೊಗ್ಗದಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ನಿಗಮದ ಮುಖ್ಯ ನಿಬಂಧಕ ಎ.ರಾಜಶೇಖರನ್‌ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ನೀಡಿರುವ ಕ್ರಿಮಿನಲ್‌ ದೂರು ಸೇರಿದಂತೆ ಇದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾವಣೆ ಮಾಡಬೇಕು. ಎಸ್‌ಐಟಿ ಸಮಗ್ರವಾಗಿ ತನಿಖೆ ನಡೆಸಿ ಪೊಲೀಸ್‌ ಇಲಾಖೆ ಮೂಲಕ ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಹೋಗಿದ್ದು ಎಲ್ಲಿಗೆ? – ಬೆಂಗಳೂರು ಕಂಪನಿಗಳೇ ಅಧಿಕವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರು ಶಿವಮೊಗದ ತಮ್ಮ ನಿವಾಸದಲ್ಲಿ‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 87 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು.Sign in to your account
Username or Email Address


Password

 Remember Me


