ನೆಲಮಂಗಲ: ಸಾಹಸ ಸಿಂಹ, ಅಭಿನವ ಭಾರ್ಗವ, ದಿವಂಗತ ಡಾ.ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಆಚರಿಸಿದ್ದಾರೆ.ನಗರದ ಹೊನ್ನಗಂಗಯ್ಯನ ಪಾಳ್ಯದಲ್ಲಿ ಕಳೆದ 7 ವರ್ಷದ ಹಿಂದೆ ಡಾ.ವಿಷ್ಣು ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಅಭಿಮಾನಿಗಳು ಕಂಚಿನ ಪುತ್ಥಳಿಯನ್ನ ಮಾಡಿಸಿ ವಿಷ್ಣು ಮಂದಿರ ನಿರ್ಮಾಣ ಮಾಡಿದ್ದರು. ಇಂದು ಡಾ.ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂದಿರವನ್ನು ವಿವಿಧ ಹೂಗಳಿಂದ ಅಲಂಕರಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮದಿಂದ ಆಚರಿಸಿದ್ದಾರೆ. ಇದನ್ನೂ ಓದಿ: ರಾಮ್ ಗೋಪಾಲ್ ವರ್ಮಾ ಸಿನಿಮಾದಲ್ಲಿ ಬುದ್ಧಿವಂತಈ ವೇಳೆ ಡಾ.ವಿಷ್ಣು ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕುಮಾರ್, ಸದಸ್ಯರಾದ ಶಿವಕುಮಾರ್, ರವಿಕುಮಾರ್, ಉಮೇಶ್, ವಿಷ್ಣು ಸೇರಿದಂತೆ ನೆರದಿದ್ದ ಮಹಿಳಾ ಅಭಿಮಾನಿಗಳು ದಿ.ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಜೈಕಾರ ಕೂಗಿ ತಮ್ಮ ಪ್ರೀತಿ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದೇ ವಿಷ್ಣು ಪ್ರತಿಮೆ ನಿರ್ಮಾಣ – ಪ್ರತಿಮೆ ತೆರವುಗೊಳಿಸಿದ ಪೊಲೀಸರುರಾಜ್ಯಾದ್ಯಂತ ಇಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಅಚರಿಸುತ್ತಿದ್ದು, ವಿಷ್ಣುವರ್ಧನ್ ನಮ್ಮನ್ನಗಲಿ ಸುಮಾರು 11 ವರ್ಷಗಳು ಕಳೆದರೂ ಅವರ ಅಭಿಮಾನಿಗಳ ಅಭಿಮಾನ ಮಾತ್ರ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ.
  






 Advertisement 




  Sign in to your account
Username or Email Address


Password

 Remember Me


