ಬೆಂಗಳೂರು: ಕಳೆದೆರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದ ಭೀಕರ ಅಫಘಾತದಲ್ಲಿ ಇಬ್ಬರು ದಾರುಣವಾಗಿ ಸಾವಿಗೀಡಾಗಿದ್ದರು. ಆದರೆ ಇದರಿಂದ ಕೆಲವರು ಎಚ್ಚೆತ್ತಂತೆ ಕಾಣ್ತಿಲ್ಲ. ಅದೇ ಫ್ಲೈಓವರ್​​ನ ಮೇಲೆ ಕೆಲವರು ಕಾರು ನಿಲ್ಲಿಸಿ, ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ.4 ಮಂದಿ ಯುವಕ-ಯುವತಿಯರು ಭರ್ಜರಿ ಡ್ಯಾನ್ಸ್ ಮಾಡಿದ್ದಲ್ಲದೆ, ಸೆಲ್ಫಿಗೂ ಪೋಸ್ ಕೊಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾರು ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷದಿಂದಾಗಿ ಬೈಕ್ ಸವಾರರಿಬ್ಬರು ಫ್ಲೈಓವರ್ ಮೇಲಿಂದ ಕೆಳಗಡೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನ ಯುವಕ ಯುವತಿಯರು ಹುಚ್ಚಾಟ ಮೆರೆದಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಮೇಲಿನಿಂದ ಬಿದ್ದು ಟೆಕ್ಕಿ ಯುವಕ, ಯುವತಿ ಸಾವುಹಿಂದಿನ ಘಟನೆ:
ಕಾರು ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದಾಗಿ ಬಲೆನೋ ಕಾರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರು. ಎಲೆಕ್ಟ್ರಾನಿಕ್ ಸಿಟಿಯ ಫ್ಲೈಓವರ್ ಸಿಂಗಸಂದ್ರ ಬಳಿ ಘಟನೆ ನಡೆದಿತ್ತು. ಕಾರ್ ಗುದ್ದಿದ ರಭಸಕ್ಕೆ ಬುಲೆಟ್ ಬೈಕ್ ನಲ್ಲಿದ್ದ ಯುವಕ, ಯುವತಿ ಇಬ್ಬರು ಸುಮಾರು 20 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರು. ಮೃತರನ್ನು ಪ್ರೀತಮ್(30) ಮತ್ತು 28 ವರ್ಷದ ಯುವತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಟೆಕ್ಕಿಗಳಾಗಿದ್ದರು. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಅಪಘಾತ – ನಿನ್ನೆಯಷ್ಟೇ ಕೆಲಸಕ್ಕೆ ಸೇರಿದ್ದ ಕೃತಿಕ ರಾಮಾನ್






 Advertisement 




Sign in to your account
Username or Email Address


Password

 Remember Me


