ಬೆಂಗಳೂರು: ನಗರದಲ್ಲಿ ಕೊರೊನಾದಿಂದಾಗಿ ನೈಟ್ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಮೆಟ್ರೋ ಸೇವೆಗೆ ಅವಧಿ ನಿಗದಿ ಪಡಿಸಿತ್ತು. ಆದರೆ ಇದೀಗ ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ ಅವಧಿ ವಿಸ್ತರಣೆಗೊಂಡಿದೆ.ಈ ಕುರಿತಂತೆ ಬಿಎಂಆರ್‌ಸಿಎಲ್(BMRCL) ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ ರೈಲು ಸಂಚಾರ ಸೇವೆಯು ಸೆಪ್ಟೆಂಬರ್ 18ರ ಶನಿವಾರದಿಂದ ಬೆಳಗ್ಗೆ 6ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಇರಲಿದೆ ಎಂಬುದಾಗಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರದಿಂದ್ಲೇ ಹುಚ್ಚಗಣಿ ದೇವಸ್ಥಾನ ಪುನರ್ ನಿರ್ಮಾಣ- ಸಂಪುಟ ಸಭೆಯಲ್ಲಿ ತೀರ್ಮಾನ ನಿರೀಕ್ಷೆಮೆಜೆಸ್ಟಿಕ್‍ನ ಕೆಂಪೇಗೌಡ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 9.30ಕ್ಕೆ ಕೊನೆಯ ಮೆಟ್ರೋ ರೈಲು ಹೊರಡಲಿದೆ. ಜೊತೆಗೆ ಬೆಳಿಗ್ಗೆ 7ರ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ರೈಲು ಸೇವೆ ಆರಂಭಗೊಳ್ಳಲಿದೆ. ರಾತ್ರಿ 9 ಗಂಟೆಗೆ ಕೊನೆಗೊಳ್ಳುತ್ತಿದ್ದಂತ ಮೆಟ್ರೋ ರೈಲು ಸಂಚಾರ ನಾಳೆಯಿಂದ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ಇದನ್ನೂ ಓದಿ: ಹಾಸನದಲ್ಲಿ ಲಘು ಭೂಕಂಪನ- ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲು






 Advertisement 




Sign in to your account
Username or Email Address


Password

 Remember Me


