ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ ಪರಿಹಾರದ ಬಗ್ಗೆ ಹಣಕಾಸು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು. ಇದನ್ನೂ ಓದಿ: ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆಸಂತ್ರಸ್ತರೆಲ್ಲರಿಗೂ ಪರಿಹಾರ ನೀಡುವ ಕಾರ್ಯ ಮಾಡಲಾಗುವುದು. ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂಬ ಬಗ್ಗೆ ಇರುವ ಗೊಂದಲ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.Sign in to your account
Username or Email Address


Password

 Remember Me


