ಚಿಕ್ಕಬಳ್ಳಾಪುರ: ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದಲ್ಲಿ ನಡೆದಿದೆ.ಗೌರಿಬಿದನೂರು-ಹಿಂದೂಪುರ ಮುಖ್ಯ ರಸ್ತೆಯ ಬಂಬೂ ಡಾಬಾ ಬಳಿ ಘಟನೆ ನಡೆದಿದ್ದು, ಅಟೋದಲ್ಲಿದ್ದ ಅಸ್ಸಾಂ ಮೂಲದ ಕಾರ್ಮಿಕ ಧೀರೇನ್ ಸಿಂಗ್(50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗ್ರಾನೈಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರ ಜೊತೆ ಕೆಲಸ ಮಾಡುತ್ತಿದ್ದ ಮೂವರು ಸಹೋದ್ಯೋಗಿಗಳು ಹಾಗೂ ಇತರೆ ಮೂವರು ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೋವಿಡ್ ಸಂದರ್ಭ ವಿಶಿಷ್ಟ ಸೇವೆ ಸಲ್ಲಿಸಿದ ಡಾ.ಎ.ಅನಿಲ್ ಕುಮಾರ್​ಗೆ ಚಾಣಕ್ಯ ಪ್ರಶಸ್ತಿಗಾಯಾಳುಗಳನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಚಾಲಕ ಹಾಗೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಧಿಡೀರ್ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ಆಟೋಗೆ ಡಿಕ್ಕಿ ಹೊಡೆಯಿತು ಎಂದು ಕಾರು ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಪ್ಪನ ಜೊತೆಗೆ ಅನೈತಿಕ ಸಂಬಂಧ- ಬರ್ತ್ ಡೇ ಪಾರ್ಟಿಗೆ ತೆರಳ್ತಿದ್ದವಳು ಬರ್ಬರವಾಗಿ ಹೆಣವಾದ್ಳು!






 Advertisement 




Sign in to your account
Username or Email Address


Password

 Remember Me


